ನಾಳೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ

Varta Mitra News

 

ಬೆಂಗಳೂರು, ಜೂ.26- ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ನಾಳೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಸಲಾಗುತ್ತದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ, ರಾಜ್ಯ ಒಕ್ಕಲಿಗರ ವಿವಿಧ ಸಂಘಟನೆಗಳು ಜತೆಗೂಡಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ ಪ್ರಧಾನಕಾರ್ಯದರ್ಶಿ ನಾಗರಾಜು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ ನಗರ ಪ್ರಮುಖ ರಸ್ತೆಗಳಲ್ಲಿ ಜಾನಪದ ಹಾಗೂ ಸಾಂಸ್ಕøತಿಕ ಕಲಾತಂಡಗಳ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಕೆಂಪೇಗೌಡರು ನಿರ್ಮಿಸಿರುವ ಬೆಂಗಳೂರಿನ ನಾಲ್ಕು ಮಹಾದ್ವಾರಗಳಿಂದ ಮೆರವಣಿಗೆ ಮೂಲಕ ಕಲಾತಂಡಗಳು ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಮಾವೇಶಗೊಂಡು ನಂತರ ಅರಮನೆ ಮೈದಾನಕ್ಕೆ ತೆರಳುತ್ತವೆ ಎಂದರು.
ಪಕ್ಷಾತೀತವಾಗಿ ವಿವಿಧ ಸಂಘಟನೆಗಳೊಂದಿಗೆ ಅದ್ಧೂರಿಯಾಗಿ ಕೆಂಪೇಗೌಡರ ಜಯಂತಿ ಆಚರಿಸಲು ಉದ್ದೇಶಿಸಲಾಗಿದ್ದು, ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಿದರು.
ನಾಳಿನ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಸೋಮನಕುಣಿತ, ಬೆಳ್ಳಿರಥಗಳು, ಪಲ್ಲಕ್ಕಿ ಸೇರಿದಂತೆ ವಿವಿಧ ಕಲಾಪ್ರಕಾರಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಅಲ್ಲದೆ, ಕೊಡಗಿನ ವೀರರು ತಮ್ಮದೇ ವೇಷಭೂಷಣದೊಂದಿಗೆ ಆಕರ್ಷಿಸಲಿದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ