ಬೆಂಗಳೂರು,ಜೂ.27- ರಾಜ್ಯದಲ್ಲಿನ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ದಿ ಹಾಗೂ ಭದ್ರತೆಗಾಗಿ ಸ್ಥಾಪಿಸಲಾಗಿರುವ ಮಂಡಳಿಯಲ್ಲಿ ಇದುವರೆಗೆ ಸಂಗ್ರಹವಾಗಿರುವ ಸೆಸ್ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ಇಂದಿಲ್ಲಿ ಹೇಳಿದರು.
ನಗರದ ಡೈರಿ ಸರ್ಕಲ್ ಬಳಿ ಇರುವ ಕಾರ್ಮಿಕರ ಭವನದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ವಿವಿಧ ಮಂಡಳಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಹಾಗೂ ಭದ್ರತೆಗಾಗಿ ಸ್ಥಾಪಿಸಲಾಗಿರುವ ಮಂಡಳಿಯಲ್ಲಿ ಇದುವರೆಗೆ ಸಂಗ್ರಹವಾಗಿರುವ ಸೆಸ್ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಅದನ್ನು ಕಾರ್ಮಿಕರಿಗೆ ಒದಗಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ಪಡೆದು ಸಂಪೂರ್ಣ ಕಾರ್ಯಾನುಷ್ಠಾನಕ್ಕೆ ಸೂಚನೆ ನೀಡಿದರು.
ಕಟ್ಟಡ ಕಾರ್ಮಿಕರ ಸಾಮಾಜಿಕ ಭದ್ರತೆಗೆ ವಿವಿಧ ಮಂಡಳಿಗಳು ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿ 13 ಲಕ್ಷ ಜನರು ನೋಂದಣಿಯಾಗಿದ್ದಾರೆ. ಸಾವಿರಾರು ಕೋಟಿ ರೂ. ವ್ಯವಹಾರ ನqಯುತ್ತದೆ. ಇಲ್ಲಿ ವ್ಯವಸ್ಥಿತವಾಗಿ ಯೋಜನೆಗಳು ಜಾರಿಯಾಗಬೇಕು ಎಂದು ಹೇಳಿದರು.
ನರೇಗಾ ಯೋಜನೆ ಕಾರ್ಮಿಕರನ್ನು ಕೂಡ ಈ ವ್ಯಾಪ್ತಿಗೆ ತರಲು ಯೋಜನೆ ರೂಪಿಸಲಾಗಿದೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಪಿಎಫ್, ಇಎಸ್ಐ ಸೌಲಭ್ಯ ಕಲ್ಪಿಸುವುದು ಮತ್ತು ಆ ಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸ¨sಯಲ್ಲಿ ಸುದೀರ್ಘ ಚರ್ಚೆ ನಡೆಸಿದರು.
ಸಂಘಟಿತ ಮತ್ತು ಅಸಂಘಟಿತ ವಲಯದಿಂದ ಸುಮಾರು ಒಂದೂವರೆ ಕೋಟಿಯಷ್ಟು ಕಾರ್ಮಿಕರು ಇದ್ದಾರೆ. ಇವರಿಗೆ ಎಲ್ಲ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯಾವ ಯಾವ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂಬುದರ ಬಗ್ಗೆ ಗಹನವಾದ ಚರ್ಚೆ ನಡೆಸಿದರು.
ಸ¨sಯಲ್ಲಿ ಕಾರ್ಯದರ್ಶಿ ಆದಿತ್ಯ ಆಮ್ಲ ವಿಶ್ವಾಸ್, ಸಿಇಒ ಪೆÇ್ರಮೊಲ್ಲ ಸುನೀಲ್ಕುಮಾರ್, ಆಯುಕ್ತರಾದ ಚೈತ್ರ, ಕಾರ್ಮಿಕ ಇಲಾಖೆ ಎಲ್ಲ ಅಧಿಕಾರಿಗಳು ಹಾಜರಿದ್ದರು.