ಬೆಂಗಳೂರು:ಜು-೨: ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ತಮಗೆ ಬೇಕಾದ ರೀತಿ ಭಾಷಣ ಮಾಡಿಸಿದ್ದಾರೆ. ಅವರ ಭಾಷಣದಲ್ಲಿ ಯಾವುದೇ ತಿರುಳಿಲ್ಲ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.
ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿರುವ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ, ಸರ್ಕಾರದ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇಲ್ಲ. ರೈತರ ಸಾಲಮನ್ನಾ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಅವರು ತಿಳಿಸಿಲ್ಲ. ಇದು ಸರ್ಕಾರ ತಮಗೆ ಬೇಕಾದಂತೆ ರಾಜ್ಯಪಾಲರಲ್ಲಿ ಮಾಡಿಸಿದ ಭಾಷಣವಾಗಿದೆ. ಅವರ ಭಾಷಣದಲ್ಲಿ ಯಾವುದೇ ತಿರುಳಿಲ್ಲ ಎಂದು ಟೀಕಿಸಿದ್ದಾರೆ.
ಮುಂದಿನ ಐದು ವರ್ಷ ಸರ್ಕಾರ ಏನೇನು ಕಾರ್ಯಕ್ರಮ ರೂಪಿಸಲಿದೆ, ಜನರಿಗೆ ಉಪಯೋಗವಾಗುವಂತಹ ಯೋಜನೆಗಳ ಬಗ್ಗೆ ಯಾವುದೇ ಅಂಶಗಳನ್ನು ರಾಜ್ಯಪಾಲರ ಭಾಷಣದಲ್ಲಿ ಇರಲಿಲ್ಲ ಎಂದು ಬಿಜೆಪಿ ನಾಯಕ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
Budget session,Governer VajuBhai Vala, Speech,BJP