ಬೆಂಗಳೂರು, ಜು.6- ಉದ್ಯಾನನಗರಿಯಲ್ಲಿ ನಡೆಯುತ್ತಿದ್ದ ಬ್ಲಾಕ್ ಪಲ್ಸರ್ ಸರಗಳ್ಳರು ಈಗ ಗ್ರಾಮೀಣ ಪ್ರದೇಶಕ್ಕೂ ಲಗ್ಗೆಯಿಟ್ಟಿದ್ದು, ತಾಲೂಕಿನ ಚಲ್ಲಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.
ಮೀನಾ ಎಂಬುವವರು ನಿನ್ನೆ ಹೊಲದಿಂದ ಮನೆಗೆ ವಾಪಸಾಗುತ್ತಿದ್ದಾಗ ಹಿಂಬದಿಯಿಂದ ಬ್ಲಾಕ್ ಪಲ್ಸರ್‍ನಲ್ಲಿ ಇಬ್ಬರು ಸರಗಳ್ಳರು ಮೀನಾ ಅವರನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ ಚರಂಡಿಗೆ ತಳ್ಳಿ ಕತ್ತಿನಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾರೆ.
ಹಳ್ಳಿ ಮಹಿಳೆಯಾದರೂ ಬುದ್ಧಿವಂತೆ. ಸರಗಳ್ಳರ ಫೆÇೀಟೋವನ್ನು ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಪೆÇಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ರಾಜಾನುಕುಂಟೆ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.