ಮಹೇಂದ್ರ ಸಿಂಗ್ ಧೋನಿಯ ಮತ್ತೊಂದು ಮೈಲಿಗಲ್ಲು

ಕಾರ್ಡಿಫ್, ಜು.7-ಭಾರತ ಕ್ರಿಕೆಟ್ ತಂಡದ ಮಾಜಿ ಮಹೇಂದ್ರ ಸಿಂಗ್ ಧೋನಿ ತಮ್ಮ ಯಶಸ್ವಿ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಇಂಗ್ಲೆಂಡ್‍ನ ಕಾರ್ಡಿಫ್‍ನ ಸೋಫಿಯಾ ಗಾರ್ಡನ್‍ನಲ್ಲಿ ನಿನ್ನೆ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ-20 ಆಡುವ ಮೂಲಕ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಈ ಮೂಲಕ ಕ್ರಿಕೆಟ್ ಕ್ರೀಡಾ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ 9ನೇ ಹಾಗೂ ಭಾರತದ ಮೂರನೇ ಪಟು ಎಂಬ ಗೌರವ ಎಂಎಸ್‍ಡಿಗೆ ಸಂದಾಯವಾಗಿದೆ. ಭಾರತದ ಸಚಿನ್ ತೆಂಡೂಲ್ಕರ್(664) ಹಾಗೂ ರಾಹುಲ್ ದ್ರಾವಿಡ್ (509) 500ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಈಗ ಈ ಸಾಲಿಗೆ ಧೋನಿ ಸೇರ್ಪಡೆಯಾಗಿದ್ದಾರೆ. ಶ್ರೀಲಂಕಾ ಮಹೇಲಾ ಜಯವರ್ಧನೆ, ಕುಮಾರ ಸಂಗಕ್ಕರ, ಸನತ್ ಜಯಸೂರ್ಯ, ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್, ಪಾಕಿಸ್ತಾನದ ಶಾಹಿದ್ ಅಫ್ರಿದಿ, ಹಾಗೂ ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ 500ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ