ನವದೆಹಲಿ, ಜು.8-ಸಚಿವ ಸಂಪುಟ ವಿಸ್ತರಣೆಗೆ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಎಂಟು ವರ್ಷಗಳ ಕಾಲ ದಾಖಲೆಯ ಅವಧಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಜವಾಬ್ದಾರಿ ನಿಭಾಯಿಸಿದ ಡಾ.ಜಿ.ಪರಮೇಶ್ವರ್ ಅವರು ಕೃತಜ್ಞತೆ ಸಲ್ಲಿಸಲು ನವದೆಹಲಿಗೆ ತೆರಳಿದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾದ ರಾಹುಲ್ಗಾಂಧಿ ಅವರನ್ನು ನಿನ್ನೆ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ ಅವರು ಬಜೆಟ್ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮಾಡುವಂತೆ ಹಸಿರು ನಿಶಾನೆ ತೋರಿದ್ದಾರೆ.
ಅವಕಾಶ ವಂಚಿತರಿಗೆ ಪ್ರಾತಿನಿಧ್ಯ ನೀಡುವಂತೆ ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗೂ ಜಾತಿವಾರುಪ್ರಾತಿನಿಧ್ಯ ಕ್ರೋಢೀಕರಿಸಿ, ಯಾವುದೇ ರೀತಿ ಭಿನ್ನಮತ ಬಂಡಾಯಕ್ಕೆ ಅವಕಾಶವಾಗದಂತೆ ಸಂಪುಟ ವಿಸ್ತರಣೆ ಮಾಡುವಂತೆ ಅವರು, ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಸಂಪುಟ ವಿಸ್ತರಣೆ ನಂತರ ನಿಗಮ ಮಂಡಳಿಗಳಿಗೂ