ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದುಬಂದಿದೆ.
ಕುಪ್ವಾರ ಜಿಲ್ಲೆಯ ಹಂದ್ವಾರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ಲಭ್ಯವಾಗುತ್ತಿದ್ದಂತೆಯೇ ಸೇನಾ ಪಡೆಗಳು ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಇದರಂತೆ ಇಂದು ಬೆಳಿಗ್ಗೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.