ಮಹಿಳೆಯ ಕತ್ತು ಸೀಳಿ ಹತ್ಯೆ!

ಶ್ರೀನಗರ (ಪಿಟಿಐ), ಜು.9 – ಮನೆಯೊಂದಕ್ಕೆ ನುಗ್ಗಿದ ಉಗ್ರಗಾಮಿಗಳು ಮಹಿಳೆಯೊಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೀಪುರ್ ಜಿಲ್ಲೆಯ ಹಜನ್ ಶಹಗುಂಡ್ ಗ್ರಾಮದಲ್ಲಿ ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ. ಗ್ರಾಮಕ್ಕೆ ನುಗ್ಗಿದ ಇಬ್ಬರು ಭಯೋತ್ಪಾದಕರು ಅಬ್ದುಲ್ ಮಜೀಬ್‍ದಾರ್ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ನಂತರ ಅವರ ಪತ್ನಿಯ ಕತ್ತು ಕೊಯ್ದು ಪರಾರಿಯಾಗಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದ್ದು , ಪಿಡಿಪಿ ಪಕ್ಷದ ಬೆಂಬಲಿಗ ಎಂದು ಹೇಳಲಾಗುತ್ತಿದೆ. ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಹೆಚ್ಚಿದ್ದು , ಸೇನಾಪಡೆಗಳು ಮತ್ತಷ್ಟು ಚುರುಕುಗೊಂಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ