ಹಟ್ಟಿ, ತಾಂಡಗಳು ಕಂದಾಯ ಗ್ರಾಮಗಳಾಗಿ ಪರಿವರ್ತನೆ – ಸಚಿವ ಆರ್.ವಿ.ದೇಶಪಾಂಡೆ

 

ಬೆಂಗಳೂರು,ಜು.11- ರಾಜ್ಯಾದ್ಯಂತ ಗೊಲ್ಲರಹಟ್ಟಿಗಳು, ತಾಂಡಾ, ನಾಯಕರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಮುಂದಿನ ತಿಂಗಳಲ್ಲಿ ಅಂತಿಮ ಅಧಿಸೂಚನೆಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನ ಪರಿಷತ್‍ನಲ್ಲಿ ಹೇಳಿದರು.

ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯೆ ಜಯಮ್ಮ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗೊಲ್ಲರಹಟ್ಟಿ , ತಾಂಡಾ, ನಾಯಕರ ಹಟ್ಟಿ ಸೇರಿದಂತೆ ದಾಖಲೆ ರಹಿತ ಜನವಸತಿ ಪ್ರದೇಶಗಳಾದ ವಡ್ಡರಹಟ್ಟಿ , ಕುರುಬರಹಟ್ಟಿ , ಮಿಜರೆ, ಹಾಡಿ, ದೊಡ್ಡಿ , ಪಾಳ್ಯ ಕ್ಯಾಂಪ್, ಕಾಲೋನಿ ಇತ್ಯಾದಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಮಾರ್ಚ್ 1, 2016ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ.
ವಿವಿಧ ಜಿಲ್ಲಾಧಿಕಾರಿಗಳಿಂದ ಒಟ್ಟು 2323 ಪ್ರಾಥಮಿಕ ಅಧಿಸೂಚನೆ, ಪ್ರಸ್ತಾವನೆಗಳು ಸ್ವೀಕೃತವಾಗಿವೆ. 672 ಪ್ರಕರಣಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹವಿರುದ ದಾಖಲೆ ರಹಿತ ಜನವಸತಿಗಳಲ್ಲಿನ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲು ನಿಯಮಾನುಸಾರ ಕ್ರಮ ವಹಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈಗಾಗಲೇ ಈ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ