ಚಲನಚಿತ್ರ ಅಕಾಡೆಮಿ ಬೆಳ್ಳೆ ಹೆಜ್ಜೆ ಕಾರ್ಯಕ್ರಮ

 

ಬೆಂಗಳೂರು, ಜು.14- ಕರ್ನಾಟಕ ಚಲನಚಿತ್ರ ಅಕಾಡೆಮಿಯ ಬೆಳ್ಳಿಹೆಜ್ಜೆ ಕಾರ್ಯಕ್ರಮವನ್ನು ಗಾಂಧಿಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಲಾಗಿದೆ.
ಈ ಬಾರಿ ಬೆಳ್ಳಿ ಹೆಜ್ಜೆಯಲ್ಲಿ ನಮ್ಮೊಂದಿಗೆ ಖ್ಯಾತ ಚಲನಚಿತ್ರ ನಿರ್ದೇಶಕ ಸಾಯಿಪ್ರಕಾಶ್ ಪಾಲ್ಗೊಳ್ಳಲಿದ್ದಾರೆ. ಮುಖ್ಯಅತಿಥಿಗಳಾಗಿ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡ, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಭಾಗವಹಿಸಲಿದ್ದು, ಕರ್ನಾಟ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ನಾಗತಿಹಳ್ಳಿಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ 1989ರಲ್ಲಿ ಮುತ್ತಿನಂಥ ಮನುಷ್ಯ ಚಿತ್ರದ ಮೂಲಕ ನಿರ್ದೇಶಕರಾಗಿ ಹೆಸರು ಮಾಡಿದ ಸಾಯಿಪ್ರಕಾಶ್, ಕನ್ನಡದ 87 ಚಲನಚಿತ್ರಗಳು ಸೇರಿದಂತೆ ಒಟ್ಟು 101 ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಮಹಿಳಾ ಪ್ರಧಾನ ಚಿತ್ರಗಳನ್ನೇ ಹೆಚ್ಚಾಗಿ ನಿರ್ದೇಶಿಸಿರುವ ಅವರು, ಕೆಲವು ಹಾಸ್ಯ ಹಾಗೂ ಭಕ್ತಿ ಪ್ರಧಾನ ಚಿತ್ರಗಳನ್ನು ತೆರೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಆತಂಕ ಚಿತ್ರಕ್ಕೆ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದಿದೆ.
ಹಲವಾರು ವೈಶಿಷ್ಟ್ಯಗಳನ್ನು ಕನ್ನಡ ಚಿತ್ರರಂಗಕ್ಕೆ ಸಾಯಿಪ್ರಕಾಶ್ ನೀಡಿರುವ ಕೊಡುಗೆ ಅಪಾರ. ಇದೇ ಸಂದರ್ಭದಲ್ಲಿ ಸಾಯಿಪ್ರಕಾಶ್ ಕುರಿತ ಸಾಕ್ಷ್ಯಚಿತ್ರ ಹಾಗೂ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ