‘ಕಾವೇರಿ’ ಭೋರ್ಗರೆತ; ಪ್ರವಾಹ ಭೀತಿ, ಮೈಸೂರಿಗೆ ವಿಪತ್ತು ರಕ್ಷಣಾ ದಳ

ಮಂಡ್ಯ/ಮೈಸೂರು: ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ತಿ ಹಾಗೂ ಜನರ ರಕ್ಷಣೆಗಾಗಿ ರಾಷ್ಟ್ರೀಯ ವಿಪತ್ತು ರಕ್ಷಣಾ ದಳ ಮೈಸೂರು ನಗರಕ್ಕೆ ಆಗಮಿಸಲಿದೆ.

ಈ ತಂಡವು ಮಂಡ್ಯ- ಚಾಮರಾಜನಗರ ಹಾಗೂ ಮೈಸೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಮಾಡಲಿದೆ. ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಒಂದು ಲಕ್ಷ ಕ್ಯೂಸೆಕ್ಸ್ ಆಗೋ ಸಾಧ್ಯತೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ, ರಾಜ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತಂಡವನ್ನು ಮೈಸೂರು ನಗರಕ್ಕೆ ಕಳುಹಿಸಲಾಗುತ್ತಿದೆ.

ಈ ತಂಡ ಮೂರು ಜಿಲ್ಲೆಗಳ ಮೇಲೆ ಕಣ್ಣಿಡಲಿದ್ದು, ಅವಶ್ಯಕತೆ ಬರುವ ಕಡೆಗಳಿಗೆ ತೆರಳಿ ರಕ್ಷಣಾ ಕಾರ್ಯವನ್ನು ಮಾಡಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ