ಕಪಿಲಾ ನದಿಯಿಂದ ರೈತರ ಬೆಳೆ ಹಾನಿ

ಮೈಸೂರು, ಜು.15-ಕಪಿಲಾ ನದಿ ತುಂಬಿ ಹರಿಯುತ್ತಿದ್ದು, ಸುತ್ತೂರಿನ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ರೈತರ ಬೆಳೆ ಹಾನಿಯಾಗಿ ತೀವ್ರ ನಷ್ಟ ಉಂಟಾಗಿದೆ. ಕಪಿಲಾ ನದಿಯಲ್ಲಿ ಇನ್ನೊಂದು ಅಡಿ ನೀರು ಹೆಚ್ಚಾದರೆ ಸೇತುವೆ ಮೇಲೆ ನೀರು ಹರಿಯಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೆÇಲೀಸರನ್ನು ನಿಯೋಜಿಸಲಾಗಿದೆ.
ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನೀರು ಜಮೀನಿಗೆ ನುಗ್ಗಿ ರೈತರು ಬೆಳೆದ ಬೆಳೆಯೆಲ್ಲಾ ನೀರು ಪಾಲಾಗಿದೆ. ಸುಮಾರು 50ಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಭತ್ತ ಹಾಗೂ ಇನ್ನಿತರ ಬೆಳೆಗಳು ಜಲಾವೃತಗೊಂಡಿವೆ. ಸೇತುವೆಯ ಮೇಲೆ ನದಿ ನೀರು ಹರಿದರೆ ಸಂಚಾರವೂ ಬಂದ್ ಆಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಂಚಾರ ನಿಷೇಧಿಸಲು ಸೂಚಿಸಲಾಗಿದೆ. ಸ್ಥಳದಲ್ಲಿ ಪೆÇಲೀಸರನ್ನು ನಿಯೋಜಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ