ದೇವಾಲಯದ ಬೀಗ ಮೀಟಿ ಕಳ್ಳತನ

Varta Mitra News

ತುಮಕೂರು, ಜು.16- ದೇವಾಲಯದ ಬೀಗ ಮೀಟಿ ಒಳ ನುಗ್ಗಿದ ಚೋರರು ಹುಂಡಿಯಲ್ಲಿದ್ದ ಸುಮಾರು 1 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ದೊಡ್ಡ ಸಾರಂಗಿ ಗ್ರಾಮದ ಲಕ್ಷ್ಮಿ ದೇವಸ್ಥಾನದಲ್ಲಿ ಕಳೆದ ರಾತ್ರಿ ನಡೆದಿದೆ. ರಾತ್ರಿ ಸುಮಾರು 12 ರಿಂದ 1 ಗಂಟೆ ಸಮಯದಲ್ಲಿ ದೇವಾಲಯದ ಮುಖ್ಯ ದ್ವಾರದ ಬೀಗ ಮುರಿದ ಚೋರರು ಹುಂಡಿಯಲ್ಲಿದ್ದ ಸಂಗ್ರಹವಾಗಿದ್ದ 1 ಲಕ್ಷ ಹಣವನ್ನು ಕದ್ದೊಯ್ದಿದ್ದಾರೆ. ಇಂದು ಬೆಳಗ್ಗೆ ದೇವಾಲಯದ ಅರ್ಚಕರು ಹಾಗೂ ಗ್ರಾಮಸ್ಥರು ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ತುಮಕೂರು ಗ್ರಾಮಾಂತರ ಠಾಣೆ ಪೆÇಲೀಸರಿಗೆ ಗ್ರಾಮಸ್ಥರು ದೂರು ನೀಡಿದ್ದು , ಸ್ಥಳಕ್ಕಾಗಮಿಸಿದ ಎಸ್‍ಐ ಸೋನಾರ್ , ಬೆರಳಚ್ಚು ತಜ್ಞರು, ಶ್ವಾನ ದಳ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ