ನವದೆಹಲಿ:ಜು-17: ಗೋ ಸಂರಕ್ಷಣೆ ಹೆಸರಲ್ಲಿ ಹಾಗೂ ಅಮಾಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ ಹೊಣೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ಭಯ ಮತ್ತು ಅರಾಜಕತೆ ಹೆಸರಲ್ಲಿ ಅಮಾಯಕರ ಮೇಲಿನ ದಾಳಿಯನ್ನು ಸಹಿಸಲಸಾಧ್ಯ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವೇ ಇಲ್ಲ. ಇಂತಹ ಘಟನೆಗಳ ಕುರಿತು ರಾಜ್ಯ ಸರ್ಕಾರಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಯ ರಕ್ಷಣೆ ರಾಜ್ಯ ಸರ್ಕಾರಗಳ ಹೊಣೆ. ಹೀಗಾಗಿ ಯಾವುದೇ ಕಾರಣಕ್ಕೂ ಹಿಂಸೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಅಂತೆಯೇ ಸಂಸತ್ ಈ ಬಗ್ಗೆ ಹೊಸ ಕಾನೂನು ರಚಿಸುವ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಚ್ ನಿರ್ದೇಶನ ನೀಡಿದೆ.
ಇತ್ತೀಚೆಗೆ ದೇಶದ ವಿವಿಧೆಡೆ ಗೋ ಸಂರಕ್ಷಣೆ ಹೆಸರಲ್ಲಿ ಅಮಾಯಕರ ಮೇಲೆ ದಾಳಿಗಳಾಗುತ್ತಿದ್ದು, ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಮಕ್ಕಳ ಕಳ್ಳರ ವದಂತಿ ಹಿನ್ನಲೆಯಲ್ಲಿ ದೇಶದ ವಿವಿಧೆಡೆ ಅಮಾಕರ ಮೇಲೆ ಸಾಮೂಹಿಕ ದಾಳಿಗಳಾಗುತ್ತಿತ್ತಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.
Supreme Court asks, government, create law against mob lynching