ಛತ್ತೀಸ್ ಗಢದಲ್ಲಿ ಏಳು 7 ನಕ್ಸಲರ ಎನ್ ಕೌಂಟರ್

ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್’ಕೌಂಟರ್ ನಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 7 ನಕ್ಸಲರು ಮೃತಪಟ್ಟಿದ್ದಾರೆ.
ಟಿಮಿನಾರ್ ಮತ್ತು ಪುಸನರ್ ಗ್ರಾಮಗಳಲ್ಲಿ ವಿಶೇಷ ಭದ್ರತಾ ಪಡೆ ಮತ್ತು ಜಿಲ್ಲಾ ಮೀಸಲು ಪಡೆಗಳು ನಡೆಸಿದ ಕಾರ್ಯಾಚರಣೆ ನಡೆಸುತ್ತಿತ್ತು. ಗಡಿ ಪ್ರದೇಶವಾದ ದಂತೇವಾಡ ಮತ್ತು ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ನಕ್ಸಲು ಕಾಣಿಸಿಕೊಂಡಿದ್ದಾರೆ. ಭದ್ರತಾಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಎನ್ ಕೌಂಟರ್ ನಡೆಸಿದ ಭದ್ರತಾ ಪಡೆಗಳು 7 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಹತ್ಯೆಯಾದ ನಕ್ಸಲರಿಂದ ಭದ್ರತಾ ಪಡೆಗಳು 2 ಐಎನ್ಎಸ್ಎಎಸ್ ರೈಫಲ್ ಗಳು, ಎರಡು 303 ರೈಫಲ್ ಗಳು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆಯ ಡಿಐಜಿ ಪಿ.ಸುಂದರ್ ರಾಜ್ ಅವರು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ