ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ-ಮಗಳ ಸಾವು

Varta Mitra News

ಉಡುಪಿ, ಜು.19- ಮನೆಯಂಗಳದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ ಪರಿಣಾಮ ತಾಯಿ – ಮಗಳು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಇಲ್ಲಿನ ಪೆರ್ಣಂಕಿಲ ಗ್ರಾಮದ ಗುಂಡುಪಾದೆ ಎಂಬಲ್ಲಿ ನಡೆದಿದೆ. ಮೃತರನ್ನು ಗುಂಡುಪಾದೆಯ ನಿವಾಸಿಗಳಾದ ಜಲಜಾ ನಾಯಕ್ (80)ಮತ್ತು ಸುಮತಿ (55) ಎಂದು ಗುರುತಿಸಲಾಗಿದೆ. ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಮನೆಯಂಗಳದಲ್ಲಿ ಬಿದ್ದಿತ್ತು. ಆದರೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿರಲಿಲ್ಲ. ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಗಮನಿಸಿದೆ ಅಂಗಳಕ್ಕಿಳಿದ ಜಲಜಾ ಮತ್ತು ಸುಮತಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮನೆಯಲ್ಲಿ ಇವರಿಬ್ಬರೇ ಇದ್ದರೆನ್ನಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ