ಮಳೆಯಿಂದ ಕಟ್ಟಡ ಕುಸಿದು ವ್ಯಕ್ತಿ ಸಾವು

ಕೋಲ್ಕತಾ, ಜು.23-ಭಾರೀ ಮಳೆಯಿಂದ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟು, ಕೆಲವರು ಗಾಯಗೊಂಡಿರುವ ಘಟನೆ ಇಂದು ನಸುಕಿನಲ್ಲಿ ಸಂಭವಿಸಿದೆ. ನಗರದ ಕೇಂದ್ರ ಭಾಗದಲ್ಲಿರುವ ಮುಚಿಪಾರ ಪೆÇಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದ ಬೈಠಖ್‍ಖಾನ ರಸ್ತೆಯಲ್ಲಿನ ಹಳೆ ಮತ್ತು ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವೊಂದು ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಇಂದು 2.30ರ ನಸುಕಿನಲ್ಲಿ ಉರುಳಿ ಬಿತ್ತು. ಈ ದುರ್ಘಟನೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ. ಉರುಳಿ ಬಿದ್ದ ಕಟ್ಟಡದ ಭಗ್ನಾವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ