ಪಶ್ಚಿಮ ಬಂಗಾಳಕ್ಕೆ ‘ಬಂಗ್ಲಾ’ ಎಂದು ಮರು ನಾಮಕರಣ: ಮಸೂದೆ ಮಂಡಸಿದ ಮಮತಾ ಸರ್ಕಾರ

ಕೋಲ್ಕತಾ:ಜು-೨೬: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜ್ಯದ ಹೆಸರನ್ನು ಬದಲಿಸಲು ಮುಂದಾಗಿದ್ದು, ಬಾಂಗ್ಲಾ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಸಿಎಂ ಮಮತಾ ಬ್ಯಾನರ್ಜಿ ರಾಜ್ಯದ ಹೆಸರು ಬದಲಾಣೆಗೆ ನಿರ್ಧರಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆಯೇ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದ ಹೆಸರು ಬದಲಾವಣೆಗೆ ಮುಂದಾಗಿತ್ತಾದರೂ ಇದಕ್ಕೆ ಪರ-ವಿರೋಧ ಚರ್ಚೆಗಳು ಎದುರಾಗಿದ್ದರಿಂದ ಕೆಲ ಕಾಲ ಈ ವಿವಾದಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಸ್ವತಃ ತೃಣಮೂಲ ಕಾಂಗ್ರೆಸ್ ಪಕ್ಷ ಬಂಗಾಳ ವಿಧಾನಸಭೆಯಲ್ಲಿ ಈ ಬಗ್ಗೆ ಮಸೂದೆಯನ್ನು ಮಂಡಿಸುವ ಮೂಲಕ ಮತ್ತೆ ಹಳೆಯ ವಿವಾದಕ್ಕೆ ನೀರೆರದಿದೆ.

ಇಂದು ನಡೆದ ವಿಧಾನಸಭೆ ಕಲಾಪದಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಪಶ್ಚಿಮ ಬಂಗಾಳವನ್ನು ‘ಬಂಗ್ಲಾ’ ಎಂದು ಮರು ನಾಮಕರಣ ಮಾಡುವ ಮಸೂದೆಯನ್ನು ಮಂಡಿಸಿತು. ಇದಕ್ಕೆ ಟಿಎಂಸಿ ಸೇರಿದಂತೆ ಕೆಲ ಸ್ಥಳೀಯ ಪಕ್ಷೇತರ ಶಾಸಕರೂ ಬೆಂಬಲ ನೀಡುವುದರೊಂದಿಗೆ ಮಸೂದೆಗೆ ಅನುಮೋದನೆ ದೊರೆತಿದೆ.

ವಿಧಾನಸಭೆಯ ಈ ನಿರ್ಣಯಕ್ಕೆ ಗೃಹ ಸಚಿವಾಲಯ ಅನುಮೋದನೆ ನೀಡಿದರೆ ಆಗ ಪಶ್ಚಿಮ ಬಂಗಾಳದ ಹೆಸರು ಅಧಿಕೃತವಾಗಿ ‘ಬಂಗ್ಲಾ’ ಆಗಲಿದೆ.

West Bengal assembly,passes bill,change the state’s name from West Bengal to ‘Bangla’

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ