ದಿಲ್ಲಿಯಲ್ಲಿ ಅಪಾಯದ ಮಟ್ಟ ಮೀರಿದ ಯಮುನಾ ನದಿ; ನೆರೆ ಎಚ್ಚರಿಕೆ

ಹೊಸದಿಲ್ಲಿ : ದಿಲ್ಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು  ರಾಷ್ಟ್ರ ರಾಜಧಾನಿಯಲ್ಲಿ ನೆರೆಯ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ತಗ್ಗು ಪ್ರದೇಶ ವಾಸಿಗಳನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಮಾಡುವುದಕ್ಕಾಗಿ ನೀರಾವರಿ ಮತ್ತು ನೆರೆ ನಿಯಂತ್ರಣ ಇಲಾಖೆಯು ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಂಡಿದೆ.

ಜು.27ರ ಶುಕ್ರವಾರ ಯಮುನಾ ನದಿಯು ದಿಲ್ಲಿಯ ಹಳೆ ರೈಲು ಸೇತುವೆಡಿ 204.10 ಮೀಟರ್‌ ತಲುಪಿದ್ದು ಇದು ಅಪಾಯದ ಮಟ್ಟವನ್ನು ದಾಟುವ ಎಲ್ಲ ಸೂಚನೆಗಳು ಕಂಡು ಬರುತ್ತಿವೆ ಎಂದು ಪೂರ್ವ ದಿಲ್ಲಿ ಜಿಲ್ಲಾಡಳಿತ ಹೇಳಿದೆ.

ತಗ್ಗು ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಿಸುವುದಕ್ಕಾಗಿ ರಕ್ಷಣಾ ಬೋಟುಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಮೈಕ್‌ ಮೂಲಕ ಸುರಕ್ಷಾ ಸಲಹೆಗಳನ್ನು ಜಾಹೀರುಗೊಳಿಸಲಾಗುತ್ತಿದೆ. ಕ್ಷಿಪ್ರ ಸ್ಪಂದನ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ