ಸಮಾಜದ ಕಟ್ಟಕಡೆಯ ವ್ಯಕ್ತಿಯೂ ನಮಗೆ ಮುಖ್ಯ – ಕಾಂಗ್ರೆಸ್

ನವದೆಹಲಿ,ಜು.28- ಸಮಾಜದ ಕಟ್ಟಕಡೆಯ ವ್ಯಕ್ತಿಯೂ ನಮಗೆ ಮುಖ್ಯ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ 2019ರ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿದೆ.
ಬಡವರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರಿಗೆ ಆದ್ಯತೆ ನೀಡುತ್ತಾ ಬಂದಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯಲ್ಲಿ ಮಧ್ಯಮ ವರ್ಗದವರಿಗೆ ಬಂಪರ್ ಕೊಡುಗೆ ನೀಡಲು ತಂತ್ರವೊಂದು ರೂಪಿಸಿದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ 35 ವರ್ಷದೊಳಗಿನವರನ್ನು ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಧ್ಯಮ ವರ್ಗ, ಯುವಜನರನ್ನು ಸೆಳೆಯುವ ತಂತ್ರಗಾರಿಕೆಯನ್ನು ಕಾಂಗ್ರೆಸ್ ಮಾಡುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ 35 ವರ್ಷದೊಳಗಿನವರನ್ನು ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸುವ ಚಿಂತನೆಯಲ್ಲಿದೆ.
ಮುಂದಿನ ಲೋಕಸಭೆ ಚುನಾವಣೆಯ ಹಿತದೃಷ್ಟಿಯಿಂದ ಮಧ್ಯಮ ವರ್ಗ ಹಾಗೂ ಯುವಕರನ್ನು ಸೆಳೆಯುವುದು ಕಾಂಗ್ರೆಸ್‍ನ ಮುಖ್ಯ ಗುರಿಯಾಗಿದೆ.
ಈಗಾಗಲೇ ಜು.13ರಂದು ಪ್ರಿಯಾಂಕ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ