ನವದೆಹಲಿ:ಜು-೩೧: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಅಸ್ಸಾಂ ಒಪ್ಪಂದವೂ ಸಹ ಎನ್ ಆರ್ ಸಿ( ಅಸ್ಸಾಂ ನಾಗರಿಕರ ರಾಷ್ಟ್ರೀಯ ನೋಂದಣಿ) ಉದ್ದೇಶವನ್ನೇ ಹೊಂದಿತ್ತು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.
ಎನ್ಆರ್ಸಿ ಕರಡಿನ ಬಗ್ಗೆ ಸಂಸತ್ ನಲ್ಲಿ ಇಂದೂಕೂಡ ಚರ್ಚೆ ಮುಂದುವರೆದಿದ್ದು, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರು ಎನ್ ಆರ್ ಸಿ ಕರಡನ್ನು ವಿರೋಧಿಸಿ ಗದ್ದಲ ಉಂಟು ಮಾಡಿದ್ದಾರೆ. ಕಾಂಗ್ರೆಸ್ ಸದಸ್ಯರ ಗದ್ದಲಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ವೆಂಕಯ್ಯ ನಾಯ್ಡು, ಕಾಂಗ್ರೆಸ್ಸಿನ ಹಿರಿಯ ಸದಸ್ಯರು ಪ್ರಜಾಪ್ರಭುತ್ವದ ಅವಹೇಳನ ಮಾಡುತ್ತಿದ್ದಾರೆ. ದೇವರೇ ಪ್ರಜಾಪ್ರಭುತ್ವವನ್ನು ಕಾಪಾಡಬೇಕು ಎಂದು ಹೇಳಿರು.
ಇದೇ ವೇಳೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಉತ್ತರ ನೀಡಿರುವ ಅಮಿತ್ ಶಾ, 1985 ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅದರಲ್ಲಿರುವ ಅಂಶಗಳೇ ಎನ್ ಆರ್ ಸಿಯಲ್ಲೂ ಇದೆ. ಆದರೆ ಅದನ್ನು ಜಾರಿಗೊಳಿಸಲು ಕಾಂಗ್ರೆಸ್ಸಿಗರಿಗೆ ಧೈರ್ಯ ಇರಲಿಲ್ಲ, ಆ ಕೆಲಸವನ್ನು ನಾವು ಮಾಡುತ್ತಿದ್ದೆವೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡುತ್ತಿದ್ದಾರೆ.
Parliament,Rajya sabha,Amith shah,NRC