ಮುಂಬರುವ ಗಣರಾಜ್ಯೋತ್ಸವಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶೇಷ ಅತಿಥಿ

ವಾಷಿಂಗ್ಟನ್:ಆ-೨: 2019ರ ಗಣರಾಜ್ಯೋತ್ಸವ ದಿನದಂದು ಭಾರತದ ವಿಶೇಷ ಅತಿಥಿಯಾಗಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಟ್ರಂಪ್ ಆಗಮಿಸಲಿದ್ದಾರೆಯೆಏ ಎಂಬುದು ತಿಳಿದುಬಂದಿಲ್ಲ.

ಈ ಕುರಿತು ಮಾಹಿತಿ ನೀಡಿರುವ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್‌, 2019ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಭಾರತ, ಡೊನಾಲ್ಡ್ ಟ್ರಂಪ್ ಅವರಿಗೆ ಆಹ್ವಾನ ನೀಡಿದೆ. ಆದರೆ, ಅದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನವನ್ನು ಇನ್ನೂ ತೆಗೆದುಕೊಂಡಿಲ್ಲ ಎಂದಿದ್ದಾರೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ಸುಷ್ಮಾ ಸ್ವರಾಜ್‌, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೊಡನೆ ಮಾತುಕತೆ ನಡೆಸಲು ಅಮೆರಿಕದ ರಾಜ್ಯ ಕಾರ್ಯದರ್ಶಿ ಮೈಕ್‌ ಪೆಂಪಿಯೋ, ರಕ್ಷಣಾ ಕಾರ್ಯದರ್ಶಿ ಜೇಮ್ಸ್‌ ಎನ್‌. ಮ್ಯಾಟಿಸ್‌ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿರುವುದನ್ನು ಖಚಿತಪಡಿಸಿರುವ ಸಾರಾ, ‘ದ್ವಿಪಕ್ಷೀಯ ಮಾತುಕತೆ ವೇಳೆ ಮುಂದಿನ ವರ್ಷದ ಅಧ್ಯಕ್ಷರ ಭೇಟಿ ವಿಚಾರವಾಗಿಯೂ ಚರ್ಚೆ ನಡೆಯಲಿದೆ’ ಎಂದು ತಿಳಿಸಿದ್ದಾರೆ.

ಪ್ರತಿವರ್ಷದ ಗಣರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ದೇಶಗಳ ಮುಖ್ಯಸ್ಥರಿಗೆ ಆಹ್ವಾನ ನೀಡಿ ವಿಶೇಷ ಅತಿಥ್ಯ ನೀಡಲಾಗುತ್ತದೆ. ಆ ದಿನದಂದು ನಡೆಯುವ ಪೆರೇಡ್‌ ಸಂದರ್ಭದಲ್ಲಿ ದೇಶದ ಮಿಲಿಟರಿ ಶಕ್ತಿ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸಲಾಗುತ್ತದೆ. 2018ರ ಗಣರಾಜ್ಯೋತ್ಸವದ ಪೆರೇಡ್‌ ವೇಳೆ ಆಗ್ನೇಯ ಏಷ್ಯಾದ ರಾಷ್ಟ್ರಗಳ ಸಂಘಟನೆಯ ಸದಸ್ಯ ರಾಷ್ಟ್ರಗಳಾದ ಥೈಲ್ಯಾಂಡ್‌, ವಿಯೆಟ್ನಾಂ, ಇಂಡೋನೇಷ್ಯಾ, ಮಲೇಷ್ಯಾ, ಫಿಲಿಫೈನ್ಸ್‌, ಸಿಂಗಾಪುರ, ಮ್ಯಾನ್ಮಾರ್‌, ಕಾಂಬೋಡಿಯಾ, ಲಾವೋಸ್‌ ಹಾಗೂ ಬೃನೈ ದೇಶದ ಮುಖ್ಯಸ್ಥರು ಭಾಗವಹಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

India invites Donald Trump,2019 Republic Day celebrations, White House

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ