ಬೆಂಗಳೂರು, ಆ.8 – ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯನ್ನು ಶಾಂತಿ ಮತ್ತು ಸುವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಒದಗಿಸಲು ರಾಜ್ಯ ಪೆÇಲೀಸ್ ಮಹಾನಿರ್ದೇಶಕರಿಗೆ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.
ಆಗಸ್ಟ್ 29ರಂದು ಮೊದಲ ಹಂತದಲ್ಲಿ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು, ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಅಗತ್ಯ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಿ ಶಾಂತಿ ಮತ್ತು ಸುವ್ಯವಸ್ಥಿತವಾಗಿ ಚುನಾವಣೆ ನಡೆಸುವಂತೆ ಆಯೋಗ ಕೋರಿದೆ.
ಈ ಸಂಬಂಧ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯ ಇರುವ ಸಿಬ್ಬಂದಿ ಒದಗಿಸಿ ಸೂಕ್ತ ಪೆÇಲೀಸ್ ಭದ್ರತೆ ನೀಡಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿದೆ.