ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

 

ಕೊಪ್ಪಳ, ಆ.11- ನಾನು ಯಾವುದೇ ಕ್ಷೇತ್ರದಿಂದಲೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳ ತಾಲೂಕಿನ ಬಸಾಪೂರ ಸಮೀಪದ ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಮೈತ್ರಿ ಇರುವುದಿಲ್ಲ. ಸ್ಥಳೀಯ ಮುಖಂಡರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಬಿಜೆಪಿ ಮುಖಂಡ ಕೆ.ಎಸ್. ಈಶ್ಬರಪ್ಪ ಮಹಾ ಪೆದ್ದ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೈಸನ್ನೆ ಮೂಲಕ ಈಶ್ವರಪ್ಪ ಅವರಿಗೆ ತಲೆ ಸರಿ ಇಲ್ಲ ಎಂದು ತೋರಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಗುಮಾಸ್ತನ ರೀತಿಯಲ್ಲಿ ಪತ್ರ ಬರೆಯುತ್ತಿದ್ದಾರೆ ಎಂದು ಇತ್ತೀಚೆಗೆ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಪತ್ರಕರ್ತರು ಪ್ರತಿಕ್ರಿಯೆ ಕೇಳಿದಾಗ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು.
ಇಕ್ಬಾಲ್ ಅನ್ಸಾರಿ ಹಾಗೂ ಶಿವರಾಮೇಗೌಡ ಅವರು ಜೆಡಿಎಸ್ ಬಗ್ಗೆ ನೀಡಿರುವ ಹೇಳಿಕೆ ಅವರ ವ್ಯಯಕ್ತಿಕ ಅಭಿಪ್ರಾಯ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ