ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ ಮಂಗಳವಾರ ಅಂತಿಮ ತೀರ್ಪು ಪ್ರಕಟಿಸಿದ್ದು, ಕರ್ನಾಟಕಕ್ಕೆ ಒಟ್ಟು13.70 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶ ನೀಡಿದೆ. ತೀರ್ಪಿಗೆ ಮಹದಾಯಿ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.
ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ಮಂಡಳಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಸೇರಬೇಕಾದ ನೀರಿನ ಪಾಲನ್ನು ಹಂಚಿಕೆ ಮಾಡಿ ಆದೇಶ ನೀಡಿದೆ. ಕರ್ನಾಟಕಕ್ಕೆ ಕುಡಿವ ನೀರಿಗಾಗಿ ಕೇವಲ 5.5 ಟಿಎಂಸಿ ಹಂಚಿಕೆ ಮಾಡಿದ್ದು, ರಾಜ್ಯ ಕೇಳಿದ್ದು 7.5 ಆಗಿದ್ದು, ಇದರಲ್ಲಿ 2 ಟಿಎಂಸಿ ಕಡಿಮೆ ಮಾಡಿ ಸುಪ್ರೀಂ ನ್ಯಾಯಮಂಡಳಿ ಆದೇಶ ಮಾಡಿದೆ. ಈ ಪೈಕಿ ಮಲಪ್ರಭಾ ಡ್ಯಾಂಗೆ 4 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದು, ಇನ್ನುಳಿದ 1.5 ಟಿಎಂಸಿಯನ್ನ ಮಲಪ್ರಭಾ ಜಲಾನಯನ ಪ್ರದೇಶಕ್ಕೆ ಹರಿಸುವಂತೆ ಹೇಳಿದೆ.
ರಾಜ್ಯಕ್ಕೆ ಒಟ್ಟು 13.07 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಕಳಸಾ ನಾಲೆಯಿಂದ 1.72 ಟಿಎಂಸಿ, ಬಂಡೂರಿ ನಾಲೆಯಿಂದ 2.18 ಟಿಎಂಸಿ, ಮಹದಾಯಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಬಳಕೆ ಮಾಡಲು 1.50 ಟಿಎಂಸಿ ನೀರು ಹಾಗೂ ವಿದ್ಯುಚ್ಛಕ್ತಿಗೆ ಉತ್ಪಾದನೆಗೆ 8.02 ಟಿಎಂ ನೀರು ಹಂಚಿಕೆ ಮಾಡಿ ಮಹತ್ವದ ತೀರ್ಪು ನೀಡಿದೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಹದಾಯಿ ನದಿಯಿಂದ ಮಲಪ್ರಭಾ ಜಲಾಶಯಕ್ಕೆ ನೀರು ತಿರುಗಿಸುವ ಕರ್ನಾಟಕದ ಪ್ರಸ್ತಾಪಕ್ಕೆ ನ್ಯಾಯ ಮಂಡಳಿ ಒಪ್ಪಿಗೆ ನೀಡಿದೆ. ಇದು ರಾಜ್ಯದ ರೈತರ ಹೋರಾಟಕ್ಕೆ ತುಸು ಬೆಂಬಲ ಸಿಕ್ಕಂತಾಗಿದೆ.
ಯಾವುದಕ್ಕೆ ಎಷ್ಟು?
ಕೃಷಿಗೆ 7 ಟಿಎಂಸಿ
1.5 ಟಿಎಂಸಿ ಬೇಸಿನ್ ಬಳಕೆ
5.25 ಟಿಎಂಸಿ ಕಾಳಿ ಜಲ ವಿದ್ಯುತ್ ಯೋಜನೆಗೆ
15. 50 ಟಿಎಂಸಿ ಮಹದಾಯಿ ನದಿ ಪ್ರಾತ್ರದಲ್ಲಿ ವಿದ್ಯುತ್ ಬಳಕೆಗೆ
1.5ಮಹದಾಯಿ ಕಣಿವೆ ವ್ಯಾಪ್ತಿ ಬಳಕೆಗೆ
8.02 ವಿದ್ಯುತ್ ಉತ್ಪಾದನೆಗೆ
ಒಟ್ಟು 13.70 ಟಿಎಂಸಿ ಕರ್ನಾಟಕಕ್ಕೆ ಹಂಚಿಕೆ
ಕರ್ನಾಟಕಕ ಪರ ವಾದ ಏನಾಗಿತ್ತು?
ಹುಬ್ಬಳ್ಳಿ- ಧಾರವಾಡಕ್ಕೆ ಕುಡಿಯುವ ನೀರಿಗೆ ಸೂಕ್ತ ಪರ್ಯಾಯವಿಲ್ಲ. ಕೇಂದ್ರ ಜಲ ಆಯೋಗದ ಪ್ರಕಾರ ಕುಡಿಯುವ ನೀರಿಗೆ ಅತಿ ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕಕ್ಕೆ ತನ್ನ ಪಾಲಿನ 14.98 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ನೀಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಹುಬ್ಬಳ್ಳಿ ಧಾರವಾಡಕ್ಕೆ ಕುಡಿಯಲು 7.56 ಟಿಎಂಸಿ ನೀರು ಬೇಕು. ಮಹದಾಯಿಯ ನೀರು ಹು-ಧಾ ಕ್ಕೆ ಕುಡಿಯಲು ಸಿಕ್ಕರೆ ಮಲಪ್ರಭದ ಮೇಲಿನ ಒತ್ತಡ ಕಡಿಮೆ ಆಗಿ ಅದರ ನೀರನ್ನು ನೀರಾವರಿಗೆ ಬಳಸಬಹುದು. ಗೋವಾ ಸರ್ಕಾರ 113 ಟಿಎಂಸಿ ನೀರು ಮಹದಾಯಿಯಲ್ಲಿದೆ ಎನ್ನುತ್ತದೆ. ಆದರೆ 173 ಟಿಎಂಸಿ ಮಹದಾಯಿ ನೀರಿಗೆ ಬೇಡಿಕೆ ಸಲ್ಲಿಸುತ್ತದೆ. ಗೋವಾ ಮಂಡಿಸಿರುವ ವಾದ ಸರಿಯಲ್ಲ ಮತ್ತು ತಪ್ಪು ದಾರಿಗೆಳೆಯುತ್ತಿದೆ. ಅಂತಾರಾಜ್ಯ ನದಿಗಳಲ್ಲಿ ನೀರಿನ ಬಳಕೆಗೆ ಸಂಬಂಧಿಸಿದಂತೆ ಯಾವುದೇ ರಾಜ್ಯವು ಇನ್ನೊಂದು ರಾಜ್ಯದ ಅನುಮತಿ ಪಡೆಯಬೇಕು ಎಂಬುದಿಲ್ಲ. ಆದರೆ ಮತ್ತೊಂದು ರಾಜ್ಯವು ಯೋಜನೆಯಿಂದ ತನಗೆ ಹಾನಿ ಆಗುತ್ತದೆ ಎಂದರೆ ಮಾತ್ರ ದೂರು ಸಲ್ಲಿಸಬಹುದು ಎಂದು ವಾದ ಮಂಡಿಸಿತ್ತು.