ಮಹದಾಯಿ ನ್ಯಾಯ ಮಂಡಳಿ ಹಂಚಿಕೆ ಮಾಡಿರುವ ನೀರನ್ನು ಸೂಕ್ತ ರೀತಿಯಲ್ಲಿ ಬಳಸಲು ಒತ್ತಾಯ

 

ಬೆಂಗಳೂರು, ಆ.16-ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯ ಮಂಡಳಿ ಹಂಚಿಕೆ ಮಾಡಿರುವ 13.42ಟಿಎಂಸಿ ನೀರನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಕುರಿತಂತೆ ಯೋಜನೆ ರೂಪಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಆಗ್ರಹಿಸಿ ಸಹ್ಯಾದ್ರಿ ಜಲ-ಜನ ಸಂಸ್ಥೆ ಕೋರಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಪೆÇ್ರ.ಕೃಷ್ಣಭಟ್, ಈಗಾಗಲೇ ಈ ಸಂಬಂಧ ತಜ್ಞರ ತಂಡವೊಂದು ಮಹದಾಯಿ ಸೂಕ್ಷ್ಮ ಮತ್ತು ನರಸಿಂಹಪುರ ಸಮಗ್ರ ಏತನೀರಾವರಿ ಯೋಜನೆಯನ್ನು ಸಿದ್ಧಪಡಿಸಿದೆ. ಇದರಡಿ ಸೂಕ್ಷ್ಮ ನೀರಾವರಿಗೆ ಒತ್ತು ನೀಡಲಾಗಿದ್ದು, ಎರಡು ಲಕ್ಷ ಎಕರೆ ಕೃಷಿ ಭೂಮಿಗೆ ಇದರಿಂದ ನೀರು ಸಂಪರ್ಕ ಕಲ್ಪಿಸಬಹುದಾಗಿದೆ. ಸುಮಾರು 12 ಸಾವಿರ ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಬೇಕಾಗಿದ್ದು, ಕೇಂದ್ರ ಸರ್ಕಾರದಿಂದ ಶೇ.60ರಷ್ಟು ಪಾಲು ಹೊಂದಬೇಕಿದೆ. ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಈ ಸಂಬಂಧ ರಾಜ್ಯದ ರೈತರ ನಿಯೋಗ ಭೇಟಿ ಮಾಡಿ ಚರ್ಚೆಯನ್ನೂ ನಡೆಸಿದೆ ಎಂದು ವಿವರಿಸಿದರು.
ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿ ನ್ಯಾಯ ಮಂಡಳಿಯಿಂದ ದೊರೆತ ನೀರಿನ ಸದ್ಬಳಕೆಗೆ ಸೂಕ್ತ ಕ್ರಮವಹಿಸುವಂತೆ ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ