ಮಡಿಕೇರಿ:ಆ-17: ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟಕ್ಕೆ ಮುಂದುವರೆದಿದ್ದು, ಗುಡ್ಡ ಕುಸಿತ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಜನರು ಜೀವ ಕೈಲಿಹಿಡಿದು ಬದುಕುವಂತಾಗಿದೆ. ನಿರಂತರ ಮಳೆಗೆ ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸಾವಿರಾರು ಜನರು ಮನೆ-ಮಠ ಕಳೆದುಕೊಂಡು ರಕ್ಷಣೆಗಾಗಿ ಮೊರೆಯಿಟ್ಟಿದ್ದಾರೆ.
ಮಳೆ ಹಿನ್ನಲೆಯಲ್ಲಿ ಕೊಡಗು-ಮಂಗಳೂರಿನ ಹೆದ್ದಾರಿಗಳು ಸಂಪೂರ್ಣವಾಗಿ ಬಂದ್ ಆಗಿವೆ. ಮಳೆ ಸಂಬಂಧಿತ ದುರಂತದಲ್ಲಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಮಡಿಕೇರಿ ತಾಲೂಕುಗಳಲ್ಲಿ ಐವರು ಮೃತಪಟ್ಟಿದ್ದಾರೆ. ಕಲಬುರಗಿಯಲ್ಲಿ ಗೋಡೆ ಕುಸಿದುಬಿದ್ದ ಪರಿಣಾಮ ಮೂವರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕೊಡಗಿನಲ್ಲಿ ರಕ್ಷಣೆಗಾಗಿ ಮೊರೆಯಿಡುತ್ತಿರುವವರ ನೆರವಿಗಾಗಿ ಈ ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.
kodagu,flood,helplin