ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಇಳಿಮುಖ

 

ಬೆಂಗಳೂರು,ಆ.20-ಕೊಡಗು ಸೇರಿದಂತೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗುತ್ತಿದೆ. ಇನ್ನು ಕೆಲವು ದಿನಗಳ ಕಾಲ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ವಾಡಿಕೆಗಿಂತ ಹೆಚ್ಚು ಪ್ರಮಾಣದ ಮಳೆಯಾಗಿದ್ದರಿಂದ ಅತಿವೃಷ್ಟಿ ಹಾಗು ಪ್ರವಾಹವಾಗಿತ್ತು. ನಿನ್ನೆ ಚಿಕ್ಕಮಗಳೂರು ಹಾಗೂ ಕೊಡಗಿನ ಕೆಲವೆಡೆ ಭಾರೀ ಮಳೆಯಾಗಿದೆ. ಆದರೂ ಒಟ್ಟಾರೆ ಮಳೆ ಪ್ರಮಾಣ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಎಡಬಿಡದೆ ನಿರಂತರವಾಗಿ ಸುರಿದ ಮಳೆಯಿಂದ ಭೂಮಿಯಲ್ಲಿ ತೇವಾಂಶದ ಪ್ರಮಾಣ ಹೆಚ್ಚಾಗಿ ಭೂಕುಸಿತಗಳು ಉಂಟಾಗಿವೆ ಎಂದರು.
ಕರಾವಳಿ , ಮಲೆನಾಡು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ರಾಜ್ಯದ ಒಳನಾಡಿನಲ್ಲಿ ಎಲ್ಲೂ ಭಾರೀ ಮಳೆಯಾದ ವರದಿಯಾಗಿಲ್ಲ. ಕೆಲವೆಡೆ ಚದುರಿದಂತೆ ಸಾಧಾರಣ ಪ್ರಮಾಣದ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಉತ್ತಮವಾದ ಮಳೆಯಾಗಿದೆ. ಸದ್ಯಕ್ಕೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ