ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಮಳೆ

 

ಬೆಳಗಾವಿ,ಆ.22- ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮಹಾದಾಯಿ ಮತ್ತು ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಹದಿಮೂರು ಹಳ್ಳಿಗಳ ಸಂಪರ್ಕ ಕಡಿತವಾಗಿದೆ.
ಖಾನಾಪುರ ತಾಲೂಕಿನ ಹದಿಮೂರು ಹಳ್ಳಿಗಳ ಸಂಪರ್ಕ ಕಡಿತಗೊಂಡ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಬಿದಿರಿನ ಪಲ್ಲಕ್ಕಿಯಲ್ಲಿ ಹೊತ್ತು ಗವಾಳಿ ಗ್ರಾಮಸ್ಥರು ಹೊಳೆ ದಾಟಿರುವ ಘಟನೆ ನಡೆದಿದೆ.
ಮಹಿಳೆಯನ್ನು ಖಾನಾಪೂರ ಪಟ್ಟಣದ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಗವಾಳಿ ಗ್ರಾಮ ಸಂಪರ್ಕ ಕಳೆದುಕೊಂಡ ಕಾರಣ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಖಾನಾಪುರದವರೆಗೆ ಬಿದುರಿನ ಪಲ್ಲಕ್ಕಿಯಲ್ಲಿ ಹೊತ್ತು ತಂದಿದ್ದು, ಹದಿಮೂರು ಹಳ್ಳಿಗಳ ಜನ ಸಂಕಷ್ಟದಲ್ಲಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾಡಿನಲ್ಲಿ ಶೀತ ವಾತಾವರಣ ಹೆಚ್ಚಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಮಹಿಳೆಯರು, ಮಕ್ಕಳು ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ.
ಮಹದಾಯಿ ನದಿ ತುಂಬಿ ಹರಿಯುತ್ತಿದ್ದು ಗ್ರಾಮಗಳ ಸಂಪರ್ಕ ರಸ್ತೆ ಜಲಾವೃತಗೊಂಡಿದೆ. ಉಳಿದ ಹದಿಮೂರು ಹಳ್ಳಿಗಳ ಸಂಪರ್ಕ ರಸ್ತೆಗಳು ಜಲಾವೃತಗೊಂಡಿವೆ ಎಂದು ತಿಳಿದು ಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ