ಬ್ರಹ್ಮಶ್ರೀ ನಾರಾಯಣಗುರು ಜಯಂತಿ

 

ಬೆಂಗಳೂರು, ಆ.25-ಕನ್ನಡ ಮತ್ತು ಸಂಸ್ಕøತಿ ಇಲಾಖೆವತಿಯಿಂದ ಇದೇ 27 ರಂದು ಸಂಜೆ 5.30 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕೇರಳದ ವರ್ಕಲದಲ್ಲಿರುವ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಲಾಗುತ್ತಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮ ಉದ್ಘಾಟಿಸಿದ್ದು, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಡಾ. ಜಯಮಾಲ ರಾಮಚಂದ್ರ, ವಿಧಾನ ಪರಿಷತï ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಬಿಎಂಪಿ ಮೇಯರ್ ಆರ್. ಸಂಪತ್‍ರಾಜ್ ಹಾಗೂ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಉದಯ್ ಬಿ. ಗರುಡಾಚಾರ್ ವಹಿಸಲಿದ್ದಾರೆ.ಸಂಜೆ 4 ಗಂಟೆಗೆ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಬಳಿಯಿಂದ ರವೀಂದ್ರ ಕಲಾಕ್ಷೇತ್ರದವರೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರದೊಂದಿಗೆ ಚಂಡೆ ವಾದನ, ಹುಲಿವೇಷ, ಕೋಲು ನೃತ್ಯ, ಕಂಗೀಲು ನೃತ್ಯ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಬ್ರಹ್ಮಶ್ರೀ ಗುರುಗಳ ಜೀವನ ಸಾಧನೆ ಕುರಿತು ಛಾಯಾಚಿತ್ರ ಹಾಗೂ ವಸ್ತು ಪ್ರದರ್ಶನ, ಸಂಜೆ 5.30 ಗಂಟೆಗೆ ಕೋಲಾರದ ಡಿ.ಆರ್. ರಾಜಪ್ಪ ಮತ್ತು ತಂಡದವರಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ