
ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಪೊಲೀಸ್ ಮಿಷನರೇಟ್ ನ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿದ್ದ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ತಕ್ಷಣದಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದ್ರೆ, ಕೊಪ್ಪಳ ಎಸ್ಪಿ ಡಾ.ಅನೂಪ ಶೆಟ್ಟಿಯನ್ನ ಹುಬ್ಬಳ್ಳಿ- ಧಾರವಾಡದ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ನಿಯೋಜನೆ ಮಾಡಿ. ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.