ಬೆಂಗಳೂರು,ಆ.29-ರಾಜಧಾನಿ ಬೆಂಗಳೂರು ಸೇರಿದಂತೆ ಕನ್ನಡ ಭಾಷೆಯನ್ನು ಶಾಲೆಯಲ್ಲಿ ಓದಿಸದೆ ಉದ್ದಟತನ ತೋರಿರುವ ರಾಜ್ಯದ 20 ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಪ್ರಾಧಿಕಾರ ನೀಡಿರುವ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ವರದಿಯನ್ನು ರಾಜ್ಯ ಸರ್ಕಾರ ಕನ್ನಡ ಭಾಷೆ ಬಗ್ಗೆ ನಿರ್ಲಕ್ಷ್ಯ ತೋರಿರುವ ಶಾಲೆಗಳ ವಿರುದ್ದ ಕ್ರಮ ಕೈಗೊಳ್ಳುವ ಕುರಿತು ಕೂಡಲೇ ಅಭಿಪ್ರಾಯ ತಿಳಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.
2015 ಕನ್ನಡ ಭಾಷಾ ಕಾಯ್ದೆ ಪ್ರಕಾರ ರಾಜ್ಯದ ಪ್ರತಿಯೊಂದು ಸಿಬಿಎಸ್‍ಇ, ಐಸಿಎಸ್‍ಇ, ಕೇಂದ್ರೀಯ ವಿದ್ಯಾಲಯ ಸೇರಿದಂತೆ ಪ್ರತಿಯೊಂದು ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಡ್ಡಾಯವಾಗಿ ಕಲಿಸಲೇಬೇಕೆಂಬ ನಿಯಮವಿದೆ. ರಾಜ್ಯ ಸರ್ಕಾರ ಉಭಯ ಮಂಡಲದ ಉಭಯ ಸದನಗಳಲ್ಲಿ ಈ ಕಾಯ್ದೆಯನ್ನು ಅಂಗೀಕರಿಸಿತ್ತು.
ಆದರೆ ಬೆಂಗಳೂರು ಸೇರಿದಂತೆ ಸಿಬಿಎಸ್‍ಇ, ಐಸಿಎಸ್‍ಇ , ಕೇಂದ್ರೀಯ ವಿದ್ಯಾಲಯ , ಅನುದಾನ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಕನ್ನಡವನ್ನು ಮಕ್ಕಳಿಗೆ ಕಡ್ಡಾಯವಾಗಿ ಒಂದು ಭಾಷೆಯನ್ನಾಗಿ ಬೋಧಿಸಬೇಕೆಂಬ ನಿಯಮವನ್ನು ಜಾರಿ ಮಾಡಿದ್ದರೂ ಈ ನಿಯಮ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ.
ಕನ್ನಡಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕೆಲ ಸಂದರ್ಭಗಳಲ್ಲಿ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದಿದ್ದರು. ನಮಗೆ ಶಾಲೆಯಲ್ಲಿ ಕನ್ನಡ ಭಾಷೆಯನ್ನು ಹೇಳಿಕೊಡುತ್ತಿಲ್ಲ ಎಂಬುದನ್ನು ವಿದ್ಯಾರ್ಥಿಗಳೇ ಬಹಿರಂಗಪಡಿಸಿದ್ದರು.
ಯಾವ ಕಾರಣಕ್ಕಾಗಿ ಶಾಲೆಯಲ್ಲಿ ಕನ್ನಡ ಭಾಷೆಯನ್ನು ಹೇಳಿಕೊಡುತ್ತಿಲ್ಲ ಎಂದು ಕಾರಣ ಕೇಳಿ ನೋಟೀಸ್ ನೀಡಿದ್ದರೂ ಪ್ರಾಧಿಕಾರಕ್ಕೆ ಯಾವುದೇ ರೀತಿಯ ಸಮರ್ಪಕ ಉತ್ತರ ನೀಡಿರಲಿಲ್ಲ.
ಕನ್ನಡ ಭಾಷೆಯನ್ನು ಉಲ್ಲಂಘನೆ ಮಾಡಿದರೆ 500 ರೂ. ದಂಡ ವಿಧಿಸಲಾಗುತ್ತದೆ ಎಂಬ ನಿಯಮವಿದ್ದರೂ ಶಾಲಾ ಆಡಳಿತ ಮಂಡಳಿ ನಮ್ಮನೇನೂ ಮಾಡಲು ಸಾಧ್ಯವಿಲ್ಲ ಎಂದು ಉದ್ದಟತನ ಮೆರೆದಿದ್ದರು.
ಇದೆಲ್ಲವನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಾಭಿವೃದ್ಧಿ ಪ್ರಾಧಿಕಾರ ಇಂಥ ಶಾಲೆಗಳನ್ನು ರದ್ದು ಮಾಡುವುದು ಇಲ್ಲವೆ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಈ ಶಾಲೆಗಳ ಭವಿಷ್ಯ ತೀರ್ಮಾನವಾಗಲಿದೆ.