ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ: ಎನ್.ಮಹೇಶ್

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರಿಗೆ ಎಲ್ಲಾ ಕಾಂಗ್ರೆಸ್ ಶಾಸಕರು ಬೆಂಬಲ ನೀಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದಾರೆ.

ಚಾಮರಾಜನಗರದ ಕೊಳ್ಳೆಗಾಲದಲ್ಲಿ ಮಾತನಾಡಿದ ಸಚಿವ ಮಹೇಶ್ ಕುಮಾರಸ್ವಾಮಿಯವರು ಅಭಿವೃದ್ದಿ ಕೆಲಸಗಳ ಕನಸು ಇಟ್ಟುಕೊಂಡಿದ್ದಾರೆ. ಅಂತಹವರಿಗೆ ಅಡಚಣೆ ಆಗಬಾರದು. ನಾನು ಸಿಎಂ ಕುಮಾರಸ್ವಾಮಿಯವರಿಗೆ  ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದರು.

ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಯೊಂದರಲ್ಲಿ ತಾನು ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು.  ಈ ಹಿನ್ನಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ. ಸಚಿವ ಎನ್.ಮಹೇಶ್ ಜೆಡಿಎಸ್ ಬೆಂಬಲದಿಂದ ಬಹುಜನ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ