ವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ

ಬೆಂಗಳೂರು, ಫೆ.11-ವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಳಿಮಾವು ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಭರತ್(20) ಮೃತ ದುರ್ದೈವಿ.

ಗಾಯಗೊಂಡಿರುವ ಚಾಲಕ ಲೋಕೇಶ್‍ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.
ನೈಸ್‍ರೆಸ್ತೆಯಿಂದ ಬನ್ನೇರುಘಟ್ಟ ಬ್ರಿಡ್ಜ್ ಕಡೆಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಭರತ್ ಮೃತಪಟ್ಟಿದ್ದಾರೆ.

ಹೊಸದಾಗಿ ಕಾರು ಖರೀಸಿದ ಲೋಕೇಶ್ ಪ್ರಮಾಣಿಕ ಭರತ್‍ನನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಮುಂಜಾನೆ 2.40ರ ಸುಮಾರಿನಲ್ಲಿ ಈ ದುರ್ಘಟನೆ ಸಂಭವಿಸಿದೆ.

ಈ ಸಂಬಂಧ ಹುಳಿಮಾವು ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಫೋಟೋ ಕ್ರೆಡಿಟ್: techinasia.com (ಪ್ರಾತಿನಿಧ್ಯಕ್ಕಾಗಿ ಮಾತ್ರ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ