ಉಡುಪಿ: ಉಡುಪಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಡಾ.ಜಯಮಾಲ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು