ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಇಂದು ಭೇಟಿ ನೀಡಿದ ಹಿನ್ನಲೆಯಲ್ಲಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ಕೊಟ್ಟು ಶ್ರೀಕೃಷ್ಣ ದೇವರ ಅನುಗ್ರಹ ಪಡೆದರು.
ಬಳಿಕ ಪರ್ಯಾಯ ಮಾಠಾಧೀಶರ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಡಾ.ಜಯಮಾಲ , ವಿಧಾನ ಪರಿಷತ್ತಿನ ಸದಸ್ಯ ಬೋಜೇ ಗೌಡ ಅವರು ಉಪಸ್ಥಿತರಿದ್ದರು.