ಪೆಟ್ರೋಲ್ ಮತ್ತು ಡೀಸೆಲ್ ದರಲ್ಲಿ ಮತ್ತೆ ಗಣನೀಯ ಪ್ರಮಾಣದಲ್ಲಿ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಸೆ.10ರದು ವಿಪಕ್ಷಗಳು ಕರೆ ನೀಡಿರುವ ಭಾರತ ಬಂದ್ ಗೆ ಇನ್ನಷ್ಟು ಬಲಬಂದಂತಾಗಿದೆ.

ದೆಹಲಿಯಲ್ಲಿ ಶುಕ್ರವಾರ ಲೀಟರ್ ಪ್ರತೀ ಲೀಟರ್ ಪೆಟ್ರೋಲ್​ ದರ ಏಕಾಏಕಿ 48 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಪ್ರತೀ ಲೀಟರ್ ಗೆ 79.99 ರೂ.ಗಳಿಗೆ ಮಾರಾಟವಾಗುತ್ತಿದೆ. ಇನ್ನು ಡಿಸೇಲ್​ ಬೆಲೆ ಲೀಟರ್ ಗೆ 72.07 ರೂ. ಆಗಿದ್ದು, 52 ಪೈಸೆ ಏರಿಕೆಯಾಗಿದೆ.

ಮುಂಬೈನಲ್ಲಿ ಪ್ರತಿ ಲೀ.ಗೆ ಪೆಟ್ರೋಲ್ 87.39 ರೂ ಏರಿಕೆಯಾಗಿದ್ದು, ಡಿಸೇಲ್​ 76.51 ರೂ.ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 82.19 ರೂ. ಆಗಿದ್ದು, 21 ಪೈಸೆಯಷ್ಟು ಏರಿಕೆಯಾಗಿದೆ. ಡೀಸೆಲ್​ ಬೆಲೆ ಕೂಡ 73.93 ರೂ. ಆಗಿದ್ದು, 21 ಪೈಸೆ ಏರಿಕೆಯಾಗಿದೆ.

ಈ ಕುರಿತು ಮಾತನಾದಿರುವ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿರುವುದು ಮತ್ತು ಡಾಲರ್​ ಎದುರು ರೂಪಾಯಿ ಕುಸಿಯುತ್ತಿರುವುದೇ ಬೆಲೆ ಏರಿಕೆಗೆ ಕಾರಣ. ಸದ್ಯದ ಬೆಲೆ ಏರಿಕೆ ಶಾಶ್ವತವೂ ಅಲ್ಲ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ