ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ದರ 1 ರೂ. ಕಡಿತ

ಕೋಲ್ಕತ್ತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು 1 ರು. ಕಡಿತಗೊಳಿಸಿ ಆದೇಶಿಸಿದ್ದಾರೆ.

ಇಂಧನ ಬೆಲೆಗಳ ಮೇಲೆ ಸೆಸ್ ಅನ್ನು ತಗ್ಗಿಸಲು ಕೇಂದ್ರವನ್ನು ಒತ್ತಾಯಿಸಿದ ಮಮತಾ “ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ಗೆ ಒಂದು ರೂಪಾಯಿ ಕಡಿತ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದೇವೇಳೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾಗತಿಕ ಕಚ್ಚಾ ತೈಲ ಬೆಲೆ ಇಳಿಮುಖವಾಗಿದ್ದರೂ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಸಿದೆ ಎಂದು ಆರೋಪಿಸಿದ್ದಾರೆ.

“ನಮ್ಮ ಸರ್ಕಾರ ಈಚಿನ ವರ್ಷಗಳಲ್ಲಿ ಒಮ್ಮೆಯೂ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಮಾರಾಟ ತೆರಿಗೆಯನ್ನು ಅಥವಾ ಸೆಸ್ ಅನ್ನು ಹೆಚ್ಚಳ ಮಾಡಿಲ್ಲ” ಅವರು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ