ಬಿಜೆಪಿ ಶಾಸಕರ ಮೇಲೆ ಬೇಹುಗಾರಿಕಗೆ

ಬೆಂಗಳೂರು,ಸೆ.12- ಪಕ್ಷಕ್ಕೆ ಕೈ ಕೊಟ್ಟು ಕಾಂಗ್ರೆಸ್ ಕಡೆ ಮುಖ ಮಾಡುತ್ತಿರುವ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡುವಂತೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರಿಗೆ ಸೂಚಿಸಿದ್ದಾರೆ.
ನಿನ್ನೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು, ನಮಗೂ ಬಿಜೆಪಿ ಶಾಸಕರನ್ನು ಸೆಳೆಯುವುದು ಗೊತ್ತು ಎಂದಿದ್ದರು. ಇದರಿಂದ ತುಸು ಅದೀರರಾಗಿರುವ ಬಿಎಸ್‍ವೈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದಾರೆ.

ಈ ಹೊಣೆಗಾರಿಕೆಯನ್ನು ತಮ್ಮ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಕೆಲವೇ ಕೆಲವು ಪ್ರಮುಖರಿಗೆ ಮಾತ್ರ ನೀಡಿದ್ದಾರೆ. ಚುನಾವಣೆಗೂ ಮುನ್ನ ಬೇರೆ ಪಕ್ಷಗಳಿಂದ ಗೆದ್ದಿರುವ ಶಾಸಕರ ಚಲನವಲನಗಳ ಮೇಲೆ ಒಂದು ಕಣ್ಣಿಡುವಂತೆ ಸೂಚನೆ ಕೊಟ್ಟಿದ್ದಾರೆ.

ಅದರಲ್ಲೂ ಹೊಸದುರ್ಗದ ಗೂಳಿಹಟ್ಟಿ ಶೇಖರ್, ಹಿರಿಯೂರಿನ ಪೂರ್ಣಿಮಾ ಶ್ರೀನಿವಾಸ್, ಮಾಯಕೊಂಡದ ಪೆÇ್ರ.ಲಿಂಗಣ್ಣ, ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯಕ್ , ಮಸಾಲೆ ಜಯರಾಮ್ ಸೇರಿದಂತೆ ಮತ್ತಿತರ ಸಂಶಯಾಸ್ಪದ ಶಾಸಕರ ಮೇಲೆ ಈಗಾಗಲೇ ಕಣ್ಣಿಡಲಾಗಿದೆ.
ಈ ಎಲ್ಲಾ ಶಾಸಕರು ನಾವು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಹೇಳುತ್ತಿದ್ದರೂ ಗೂಳಿಹಟ್ಟಿ ಮತ್ತು ಪೂರ್ಣಿಮಾ ಶ್ರೀನಿವಾಸ್ ಮೇಲೆ ಬಿಜೆಪಿಯ ಸಂಶಯ ನಿವಾರಣೆಯಾಗಿಲ್ಲ.

ಇಬ್ಬರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಅನ್ಯೋನ್ಯ ಸಂಬಂಧ ಇಟ್ಟುಕೊಂಡಿರುವುದರಿಂದಲೇ ಸಂಶಯದ ಮುಳ್ಳು ನೆಟ್ಟಿದೆ. ಈಗಾಗಲೇ ಉಭಯತ್ರರು ಪಕ್ಷ ಬಿಡುವುದಿಲ್ಲ ಎಂದು ಹೇಳಿಕೆ ಕೊಟ್ಟಿದ್ದರೂ ಕೆಲವು ಸಂದರ್ಭಗಳಲ್ಲಿ ಏನೂ ಬೇಕಾದರೂ ಪವಾಡ ಆಗಬಹುದೆಂಬ ಭೀತಿಯ ಹಿನ್ನಲೆಯಲ್ಲಿ ಬಿಜೆಪಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ.
ಸರ್ಕಾರ ರಚನೆ ಸಂದರ್ಭದಲ್ಲಿ ಒಂದೊಂದು ಸ್ಥಾನವು ನಿರ್ಣಾಯಕ ಪಾತ್ರ ವಹಿಸುವುದರಿಂದ ಒಬ್ಬೇ ಒಬ್ಬ ಶಾಸಕರು ಆಚೀಚೆ ಕದಲದಂತೆ ಹಿಡಿದಿಟ್ಟುಕೊಳ್ಳಲು ಬಿಜೆಪಿ ಮುಂದಾಗಿದೆ.

ಶಾಸಕರಾದ ಶ್ರೀರಾಮುಲು, ಉಮೇಶ್ ಕತ್ತಿ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಕೆಲವೇ ಕೆಲವು ಶಾಸಕರು ಮಾತ್ರ ಇದರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.
ಯಾವ ಶಾಸಕರು ಯಾವ ಬಳಿ ತೆರಳುತ್ತಾರೆ, ಅಲ್ಲಿ ನಡೆಯುವ ಮಾತುಕತೆ, ಯಾರು, ಯಾರನ್ನು ಭೇಟಿಯಾಗುತ್ತಾರೆ ಎಂಬಿತ್ಯಾದಿ ವಿಷಯಗಳ ಬಗ್ಗೆಯೂ ಗೌಪ್ಯವಾಗಿ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ