ಬೆಂಗಳೂರು, ಸೆ.15- ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ಮತ್ತು ಭಾರತಿ ನಗರ ಪೆÇಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಾಳೆ ಸಾಮೂಹಿಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಗಣೇಶೋತ್ಸವ ಸಮಿತಿ ವತಿಯಿಂದ ಸುಮಾರು 30ರಿಂದ 40 ಗಣೇಶ ಮೂರ್ತಿಗಳ ಸಾಮೂಹಿಕ ಮೆರವಣಿಗೆ ಮತ್ತು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11.30ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಸಾವಿರಾರು ಮಂದಿ ಸೇರುವ ಸಾಧ್ಯತೆ ಇದ್ದು , ಈ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ ನಾಳೆ ಈ ಭಾಗದಲ್ಲಿ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.
ವಿಸರ್ಜನೆ ವೇಳೆ ಕಿಡಿಗೇಡಿಗಳು, ಮದ್ಯದ ಅಮಲಿನಲ್ಲಿ ದುಷ್ಕøತ್ಯವನ್ನು ನಡೆಸಿ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುವ ಸಂಭವವಿರುವುದಾಗಿ ಮಾಹಿತಿ ಮೇರೆಗೆ ನಗರ ಪೆÇಲೀಸ್ ಆಯುಕ್ತರಾದ ಸುನೀಲ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ.
ಮೆರವಣಿಗೆ ಸಾಗುವ ಈ ಮಾರ್ಗಗಳು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇದಿಸಿ ಆದೇಶಿಸಿದ್ದಾರೆ.