ಕಲಬುರಗಿ: ಹೈದರಾಬಾದ್ ಕರ್ನಾಟಕ ವಿಮೊಚನಾ ದಿನಾಚರಣೆಯ ಪ್ರಯುಕ್ತ ಕಲಬುರಗಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದರು.
ಮುಖ್ಯಮಂತ್ರಿಯಾಗಿ ಇದೆ ಮೊದಲ ಬಾರಿಗೆ ಆಗಮಿಸಿದ್ದ ಕುಮಾರಸ್ವಾಮಿ ತಿಮ್ಮಾಪೂರ ವೃತ್ತದ ಬಳಿ ಇರುವ ಸರದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪಟೇಲರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ನಂತರ ಪೋಲಿಸ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೇರವೆರಿಸಿದರು.
ಇದೆ ವೇಳೆ ಡಿಸೇಲ್ ಮತ್ತು ಪೆಟ್ರೋಲ್ ಗೆ ಪ್ರತಿ ಲಿ. ಎರಡು ರೂಪಾಯಿ ಕಡಿತ ಮಾಡಲು ನಿರ್ಧರಿಸಲಾಗಿದೆ ಎಂದು ಹೆಳಿದರು. ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಜನರ ಮೇಲಿನ ಹೊರೆ ಕಡಿಮೆಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಲು ನಿರ್ಧರಿಸಲಾಗಿದ್ದು, ಪ್ರತಿ ಲೀ. ಪೆಟ್ರೋಲ್- ಡೀಸೆಲ್ ದರದಲ್ಲಿ 2 ರೂ ಇಳಿಕೆ ಮಾಡಲಾಗಿದೆ ಎಂದು ಘೋಷಿಸಿದರು.
ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರ ದಿನದಿಂದ್ ನಂತರ ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸುಕ್ಷೇತ್ರ ಗಾಣಗಾಪೂರಕ್ಕೆ ಸಿ.ಎಂ ತೆರಳಿ ದತ್ತನ ಆಶಿರ್ವಾದ ಪಡೆದರು. ದತ್ತಾತ್ರೇಯ ದೇವರ ಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದರು. ಸಿ.ಎಂ ಕುಮಾರಸ್ವಾಮಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖಗೆ೯ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.