ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ: ಸಿಎಂ ಹೆಚ್ ಡಿ ಕುಮಾರಸ್ವಾಮಿ

ಕಲಬುರಗಿ: ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ, ಸರ್ಕಾರ ಸುಭದ್ರವಾಗಿದೆ. ಬಿಕ್ಕಟ್ಟನ್ನು ಯಾರು ಸೃಷ್ಟಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಗಾಣಗಾಪುರದ ದತ್ತಾತ್ರೇಯ ದೇವಾಲಯಕ್ಕೆ ಭೇಟಿ ನೀಡಿದ ಸಿಎಂ, ದೇಗುಲದದಲ್ಲಿ ಸುವರ್ಣ ಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆಯ ನಂತರ ಮಾತನಾಡಿದ ಅವರು, ನಾಡಿನ 16 ಜಿಲ್ಲೆಗಳಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ಇದೆ. ಈ ಜಿಲ್ಲೆಗಳಲ್ಲಿ ಮಳೆ ಕರುಣಿಸು, ಪ್ರತಿಯೊಂದು ಬಡ ಕುಟುಂಬವನ್ನೂ ಸುಖವಾಗಿರಿಸು ಎಂದು ಪ್ರಾರ್ಥಿಸಿದೆ. ಇದೇ ಸಂದರ್ಭದಲ್ಲಿ ನನ್ನ ಆರೋಗ್ಯದ ಬಗ್ಗೆ ಕೂಡ ದೇವರ ಬಳಿ ಪ್ರಾರ್ಥನೆ ಮಾಡಿದ್ದೇನೆ. ಸಮ್ಮಿಶ್ರ ಸರ್ಕಾರ ಚೆನ್ನಾಗಿ ನಡೆಯಬೇಕೆಂದರೆ ಗುರು ಹಿರಿಯರ ಆಶೀರ್ವಾದ ಇರಬೇಕು, ಹಾಗಾಗಿ ದೇವರ ದರ್ಶನ ಪಡೆದಿದ್ದೇನೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ