ಬಿಜೆಪಿಗೆ ಅಭೀವೃದ್ಧಿಗಿಂತ ಅಧಿಕಾರವೇ ಮುಖ್ಯ: ಎಚ್.ವಿಶ್ವನಾಥ್ ಕಿಡಿ

ಬೆಂಗಳೂರು, ಸೆ.17- ಬಿಜೆಪಿ ನಾಯಕರಿಗೆ ರಾಜ್ಯದ ಅಭೀವೃದ್ಧಿಗಿಂತ ಅಧಿಕಾರವೇ ಮುಖ್ಯವಾಗಿದೆ, ಅದಕ್ಕಗಿ ಕೇವಲ ರಾಜಕೀಯ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಕಿಡಿಕಾರಿದರು.

ಜೆಡಿಎಸ್ ಕಚೇರಿಯಲ್ಲಿಂದು ನಡೆದ ವಿಶ್ವಕರ್ಮ ಜಯಂತಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿ ಕುಳಿತಿರುವ ಬಿಜೆಪಿಯವರು ಕೇವಲ ರಾಜಕೀಯದಲ್ಲೇ ನಿರತರಾಗಿದ್ದಾರೆ. ಜನರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುತ್ತಿದ್ದರೆ, ಇವರು ವಿಷಯವನ್ನು ಡೈವರ್ಟ್ ಮಾಡುತ್ತಿದ್ದಾರೆ. ಇವರೆಂಥ ವಿಪಕ್ಷ ಸದಸ್ಯರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ರಚನೆಯಾದ ದಿನದಿಂದಲೂ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ.ನಾವು ಕೊಡಗಿನ ಜನರ ಪುನರ್ವಸತಿಗೆ ವಿಶೇಷ ಪ್ಯಾಕೇಜ್‍ಗಾಗಿ ಪ್ರಧಾನಿ ಬಳಿ ತೆರಳಿದಾಗ ನಮ್ಮೊಂದಿಗೆ ಯಾವೊಬ್ಬ ಬಿಜೆಪಿ ಸಂಸದರೂ ಬರಲಿಲ್ಲ. ಇವರಿಗೆ ರಾಜ್ಯದ ಅಭಿವೃದ್ಧಿಯೇ ಬೇಕಾಗಿಲ್ಲ ಎಂದು ಆಕ್ಷೇಪಿಸಿದರು.
ಶಾಸಕ ರೇಣುಕಾಚಾರ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅವರಿಗೇ ಸ್ವಲ್ಪ ಬುದ್ಧಿ ಕಡಿಮೆ ಇದೆ ಎಂದು ಪ್ರತಿಕ್ರಿಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ