ಬೆಂಗಳೂರು,ಸೆ.17- ಕೇಂದ್ರ ಸಂಸದೀಯ ವ್ಯವಹಾರ ಹಾಗೂ ರಾಸಾಯನಿಕ ಗೊಬ್ಬರ ಸಚಿವ ಅನಂತಕುಮಾರ್ ಅನಾರೋಗ್ಯದಿಂದ ಲಂಡನ್ ಆಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಲಂಡನ್ನಲ್ಲಿರುವ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು ಇನ್ನು ಒಂದು ವಾರಗಳ ಕಾಲ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಕಾನ್ಸರ್ ರೋಗಕ್ಕೆ ಅನಂತಕುಮಾರ್ ಚಿಕಿತ್ಸೆ ಪಡೆಯುತ್ತಿಲ್ಲ ಎಂದು ಕುಟುಂಬದ ಮೂಲಗಳು ಖಚಿತಪಡಿಸುತ್ತಿವೆ. ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸೂಚನೆ ಮೇರೆಗೆ ಲಂಡನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಅವರ ಅನುಮತಿ ಪಡೆದು ವಿದೇಶಕ್ಕೆ ತೆರಳಿದ್ದಾರೆ.ಈ ಹಿಂದೆಯೇ ಚಿಕಿತ್ಸೆ ಪಡೆಯಬೇಕಾಗಿತ್ತಾದರೂ ಕಾರಣಾಂತರಗಳಿಂದ ಮುಂದೂಡಲಾಗಿತ್ತು.
ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆ ಹಾಗೂ ಎನ್ಡಿಎ ಸರ್ಕಾರದ ವಿರುದ್ಧ ಕೇಂದ್ರದಲ್ಲಿ ಟಿಡಿಪಿ ಅವಿಶ್ವಾಸ ನಿರ್ಣಯ ಮಂಡಿಸಿದ್ದರಿಂದ ವಿದೇಶಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ.
ಕೇಂದ್ರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿರುವುದರಿಂದ ಅಧಿವೇಶನದ ವೇಳೆ ಅವರ ಪಾತ್ರ ಇತರರಿಗಿಂತಲೂ ಪ್ರಮುಖವಾಗಿರುತ್ತದೆ.ಹೀಗಾಗಿ ಚಿಕಿತ್ಸೆಗೆ ತೆರಳಲು ಸಾಧ್ಯವಾಗಿರಲ್ಲಿಲ ಎನ್ನಲಾಗಿದೆ.
ಇದೀಗ ಪ್ರಧಾನಿಯವರೇ ಚಿಕಿತ್ಸೆಗೆ ಒಳಗಾಗಬೇಕೆಂದು ಸೂಚಿಸಿದ್ದರಿಂದ ಅನಂತಕುಮಾರ್ ಕುಟುಂಬ ಸಮೇತ ಲಂಡನ್ಗೆ ತೆರಳಿದ್ದಾರೆ.