ಬೆಂಗಳೂರು, ಸೆ.18- ನಾನು ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡಿದ್ದರೆ ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.
ಹಾಸನದ ದುದ್ದ ಸಮೀಪ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಖಾಸಗಿ ಹೋಟೆಲ್ ಬಳಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಭೂಮಿಯನ್ನು ಒತ್ತುವರಿ ಮಾಡಿಕೊಂಡಿಲ್ಲ. ಒತ್ತುವರಿಯಾಗಿದ್ದರೆ ಸರ್ಕಾರ ವಶಪಡಿಸಿಕೊಳ್ಳಲಿ ಎಂದರು.
ಸಮ್ಮಿಶ್ರ ಸರ್ಕಾರದಲ್ಲಿ ಏನೂ ಗೊಂದಲವಿಲ್ಲ. ಎಲ್ಲವೂ ಸರಿಯಿದೆ ಎಂದ ಅವರು, ಮುಖ್ಯಮಂತ್ರಿಗಳು ಇಲ್ಲಿದ್ದಾರೆ ಎಂಬ ಕಾರಣಕ್ಕೆ ಇಲ್ಲಿಗೆ ಬಂದೆ. ಇಲ್ಲಿ ನಡೆಯುತ್ತಿರುವ ಸಭೆಗೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.