ಬೆಂಗಳೂರು, ಸೆ.18-ಬಿದಿರು ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಆದ್ದರಿಂದ ರೈತರ ಜಮೀನಿನಲ್ಲಿ ಬಿದಿರು ಬೆಳೆ ಬೆಳೆಯಲು ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ಪೆÇ್ರೀತ್ಸಾಹ ನೀಡಬೇಕಾದ ಅಗತ್ಯವಿದೆ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೋಳಿ ಹೇಳಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆ ನಗರದಲ್ಲಿಂದು ಏರ್ಪಡಿಸಿದ್ದ ವಿಶ್ವ ಬಿದಿರು ದಿನಾಚರಣೆ, ಬಿದಿರು ಉತ್ಪನ್ನಗಳ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಶೇಕಡಾ 75ರಷ್ಟು ಜನರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಉಳಿದ ಶೇಕಡಾ 25ರಷ್ಟು ಜನರಿಗೆ ಆಹಾರ ಒದಗಿಸಲು ಸಾಧ್ಯವಾಗುತ್ತಿಲ್ಲ. ಆದರೆ ಉಳಿದ ದೇಶಗಳಲ್ಲಿ ಶೇಕಡಾ 25ರಷ್ಟು ಮಂದಿ ಶೇಕಡಾ 75ರಷ್ಟು ಜನರಿಗೆ ಆಹಾರ ಪೂರೈಸಿ ಉಳಿದ ಆಹಾರವನ್ನು ಬೇರೆ ದೇಶಗಳಿಗೆ ರಫ್ತು ಮಾಡುತ್ತಿದ್ದಾರೆ. ಆದರೆ ನಮ್ಮ ದೇಶದಲ್ಲಿ ಇದು ಸಾಧ್ಯವಾಗಿಲ್ಲ . ನಿರೀಕ್ಷಿತ ಮಟ್ಟದಲ್ಲಿ ಆಹಾರ ಉತ್ಪಾದನೆ ನಡೆಯುತ್ತಿಲ್ಲ ಎಂದು ಹೇಳಿದರು.
ನಮ್ಮ ದೇಶದಲ್ಲಿ ಎಪಿಎಲ್, ಬಿಪಿಎಲ್, ಅಂತ್ಯೋದಯ, ಕೂಲಿಗಾಗಿ ಕಾಳು ಮುಂತಾದ ಯೋಜನೆಗಳು ಜಾರಿಯಲ್ಲಿವೆ. ಇಲ್ಲಿ ಕೃಷಿ ಲಾಭದಾಯಕವಾಗಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಲಾಭಗಳಿಸಬೇಕಾದರೆ ಕೃಷಿಯೊಂದಿಗೆ ಲಾಭದಾಯಕವಾದ ಬಿದಿರಿನಂತಹ ವಾಣಿಜ್ಯ ಬೆಳೆಗಳನ್ನು ಬೆಳೆಯಬೇಕು ಎಂದು ಹೇಳಿದರು.
ದೇಶದಲ್ಲಿ ಬಿದಿರಿಗೆ ಸಾಕಷ್ಟು ಬೇಡಿಕೆ ಇದೆ. ಬಿದಿರಿನಿಂದ 1500ಕ್ಕೂ ಅಧಿಕ ಮಾದರಿಯ ಉಪಯೋಗಗಳಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿದಿರು ಬೆಳೆಯಲು ಸಾಕಷ್ಟು ಪೆÇ್ರೀತ್ಸಾಹ ನೀಡುತ್ತಿದೆ. ಈ ಬಗ್ಗೆ ರೈತರಲ್ಲಿ ಅರಿವಿನ ಕೊರತೆ ಇದೆ ಎಂದು ವಿಷಾದಿಸಿದರು.
ಅರಣ್ಯ ಮಾತ್ರವಲ್ಲ ಗದ್ದೆಯಲ್ಲೂ ಬಿದಿರು ಬೆಳೆಯಬಹುದು. ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ರೈತರಿಗೆ ಈ ಬಗ್ಗೆ ಅರಿವು ಮೂಡಿಸಿ ಪೆÇ್ರೀ ನೀಡಬೇಕು. ಇದರಿಂದ ರೈತರ ಆದಾಯವೂ ಹೆಚ್ಚಾಗುತ್ತದೆ ಎಂದು ಹೇಳಿದರು.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಶಾಂತಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬಿದಿರು ಮೇಳದಲ್ಲಿ ವಿವಿಧ ರೀತಿಯ ಬಿದಿರಿನಿಂದ ತಯಾರಿಸಿದ ಉತ್ಪನ್ನಗಳು ಗಮನ ಸೆಳೆದವು.