ಸಮ್ಮಿಶ್ರ ಸರ್ಕಾರ ಉರುಳಿಸುವ ಯತ್ನ ಮಾಡಿಲ್ಲ, ಶಾಸಕರನ್ನೂ ಸೆಳೆಯುತ್ತಿಲ್ಲ: ಬಿ ಶ್ರೀರಾಮುಲು

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿಲ್ಲ. ಕಾಂಗ್ರೆಸ್-ಜೆಡಿಎಸ್ ನ ಯಾವ ಶಾಸಕರನ್ನೂ ನಾವು ಸಂಪರ್ಕಿಸಿಲ್ಲ, ಆಪರೇಷನ್ ಕಮಲಕ್ಕೂ ಸೆಳೆಯುತ್ತಿಲ್ಲ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಗತ್ಯವಾಗಿ ಬಿಜೆಪಿ ವಿರುದ್ಧ ಆಪರೇಷನ್ ಕಮಲದ ಆರೋಪ ಮಾಡಲಾಗುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುತ್ತಿದ್ದೇವೆ ಆ ಪಕ್ಷಗಳ ಮುಖಂಡರು ಹೇಳುತ್ತಿದ್ದಾರೆ. ಆದರೆ ಬಿಜೆಪಿ, ಸಮ್ಮಿಶ್ರ ಸರ್ಕಾರವನ್ನು ಬೀಳಿಸೋದಕ್ಕೆ ಹೋಗಿಲ್ಲ. ದೇವರ ಮೇಲೆ ಆಣೆಯಾಗಿಯೂ ನಾವು ಯಾವ ಶಾಸಕರನ್ನು ಸಂಪರ್ಕ ಮಾಡುತ್ತಿಲ್ಲ ಎಂದರು.

ಆಂತರಿಕ ಕಚ್ಚಾಟದಿಂದ ಸರ್ಕಾರ ಉರುಳಿದರೆ ಆಗ ನಾವು ಕೈಕಟ್ಟಿ ಕೂರುವುದಿಲ್ಲ. ಅವರ‌ ಪಕ್ಷದಲ್ಲಿನ ವರ್ಗಾವಣೆ ದಂಧೆ, ರೊಕ್ಕದ ಕಾರಣಕ್ಕಾಗಿ ಅಸಮಾಧಾನ ಆಗಿರಬರಹುದು. ಅವರು ದೆಹಲಿಗಾದರೂ ಹೋಗಲಿ,ಲ್ಲಿಯಾದರೂ ಹೋಗಲಿ ಈ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ