ಬೆಂಗಳೂರು,ಸೆ.21ಯುವ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಇದ್ದಕ್ಕಿದ್ದಂತೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ವಿಧಾನಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ನಿವಾಸಕ್ಕೆ ಭಾರೀ ಭದ್ರತೆ ಒದಗಿಸಲಾಗಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಸದಾಶಿವನಗರ ಪೆÇಲೀಸ್ ಇನ್‍ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆಯನ್ನು ಒದಗಿಸಲಾಗಿದೆ. ಯಾರೇ ಮನೆಗೆ ಬಂದರೂ ಬಿಗಿ ತಪಾಸಣೆ ನಡೆಸಿ ಒಳ ಬಿಡಲಾಗುತ್ತಿದೆ.
ಮನೆಯ ಸುತ್ತಮುತ್ತ ಪೆÇಲೀಸರ ಜೊತೆಗೆ ಕೆಎಸ್‍ಆರ್‍ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಪೆÇಲೀಸರ ಅನುಮತಿಯಿಲ್ಲದೆ ಯಾರೊಬ್ಬರೂ ಪ್ರತಿಭಟನೆ ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ.
ಯಡಿಯೂರಪ್ಪನವರ ನಿವಾಸದ ಮುಂದೆ ಬ್ಯಾರಿಕೇಡ್‍ಗಳನ್ನು ಹಾಕಿದ್ದು, ಅಕ್ಕಪಕ್ಕದ ರಸ್ತೆಗಳಲ್ಲೂ ಪೆÇಲೀಸರ ಸರ್ಪಗಾವಲಿದೆ. ಅಪ್ಪಿತಪ್ಪಿಯೂ ಯಾರಾದರೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದರೆ ವಶಕ್ಕೆ ಪಡೆಯುವುದಾಗಿ ಪೆÇಲೀಸರು ಎಚ್ಚರಿಸಿದ್ದಾರೆ.
ನಿನ್ನೆ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾಂಗ್ರೆಸ್‍ನ ಕೆಲ ಕಾರ್ಯಕರ್ತರು ಬಿಎಸ್‍ವೈ ನಿವಾಸಕ್ಕೆ ನುಗ್ಗಲು ಯತ್ನಿಸುತ್ತಿದ್ದಂತೆ ಶಾಸಕರಾದ ಎಸ್.ಆರ್.ವಿಶ್ವನಾಥ್, ಎಂ.ಪಿ.ರೇಣುಕ ಚಾರ್ಯ, ವಿಧಾನಪರಿಷತ್ ಸದಸ್ಯರಾ ಅಯನೂರು ಮಂಜುನಾಥ್, ರವಿಕುಮಾರ್ ಸೇರಿದಂತೆ ಅನೇಕರು ತಿರುಗಿ ಬಿದ್ದಿದ್ದರು. ತಕ್ಷಣವೇ ಪೆÇಲೀಸರು ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದ್ದರು.
ಇಂದು ಕೆಲವರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.