ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು, ಸೆ.21-ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಜರ್‍ಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ..
ಸಿದ್ಧಾರ್ಥ ನಗರ ಬಡಾವಣೆ ನಿವಾಸಿ ಕಾವ್ಯ (17) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.
ಮೊದಲ ವರ್ಷದಪದವಿ ವ್ಯಾಸಂಗ ಮಾಡುತ್ತಿದ್ದ ಕಾವ್ಯ ನಿನ್ನೆ ಎಂದಿನಂತೆ ರಾತ್ರಿ ಎಲ್ಲರೊಂದಿಗೆ ಊಟ ಮಾಡಿ ಮಲಗಿಕೊಳ್ಳುವುದಾಗಿ ಹೇಳಿ ತನ್ನ ಕೊಠಡಿಗೆ ತೆರಳಿದ್ದಾರೆ.
ಮನೆಯವರೆಲ್ಲರೂ ಮಲಗಿದ ನಂತರ ಕಾವ್ಯ ತನ್ನ ಕೊಠಡಿಯಲ್ಲಿ ವಿಷ ಸೇವಿಸಿದ್ದಾರೆ. ಬೆಳಗ್ಗೆ 7 ಗಂಟೆಯಾದರೂ ಕಾವ್ಯ ಏಳದಿರುವುದನ್ನು ಗಮನಿಸಿದ ಮನೆಯವರು ಆಕೆಯ ರೂಮ್‍ಗೆ ಹೋಗಿ ನೋಡಿದಾಗ ಬಾಯಲ್ಲಿ ನೊರೆ ಬಂದು ಸಾವನ್ನಪ್ಪಿರುವುದು ಗೊತ್ತಾಗಿದೆ.
ವಿಷಯ ತಿಳಿದು ನಜರ್‍ಬಾದ್ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಶವಾಗಾರಕ್ಕೆ ರವಾನಿಸಲಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ