ಬೆಂಗಳೂರು, ಸೆ.22-ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆ ಹಾಗೂ ಪ್ರತಿಭಟನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಂದು ರಾಜ್ಯ ಜೆಡಿಎಸ್ ಕಾನೂನು ಘಟಕದಿಂದ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುತ್ತಿರುವುದು ಮತ್ತು ಪ್ರತಿಭಟನೆ ನಡೆಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತ ಸುನೀಲ್ಕುಮಾರ್ ಅವರಿಗೆ ಮನವಿ ಸಲ್ಲಿಸಲಿದೆ.
ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಯುವ ಅಧ್ಯಕ್ಷ ರಮೇಶ್ಗೌಡ, ಮಾಜಿ ಶಾಸಕ ಕೋನರೆಡ್ಡಿ, ರಮೇಶ್ಬಾಬು, ಪ್ರಧಾನಕಾರ್ಯದರ್ಶಿ ಎಸ್.ಪಿ.ಪ್ರದೀಪ್ಕುಮಾರ್ ಸೇರಿದಂತೆ ಇನ್ನಿತರರನ್ನೊಳಗೊಂಡ ನಿಯೋಗ ಸಂಜೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಮಾಡಲಿದೆ.